ಮುಂಬೈ:ಹೈಕೋರ್ಟ್​​ ಆದೇಶದ ಹಿನ್ನೆಲೆ ಮಹಾ ವಿಕಾಸ್ ಅಘಾಡಿ(ಎಂವಿಎ) ಕರೆ ನೀಡಿದ್ದ ಮಹಾರಾಷ್ಟ್ರ ಬಂದ್​​​ ಅನ್ನು ಹಿಂಪಡೆಯುವಂತೆ ​ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್​ ಶುಕ್ರವಾರ(ಆಗಸ್ಟ್​​ 23) ಮನವಿ ಮಾಡಿದ್ದಾರೆ.
ಇದನ್ನು ಓದಿ:ಯೂಕ್ರೇನ್​-ರಷ್ಯಾ ಯುದ್ಧದಲ್ಲಿ ಮಡಿದ ಮಕ್ಕಳನ್ನು ನೆನದು ಪ್ರಧಾನಿ ಮೋದಿ ಭಾವುಕ
ಮಹಾರಾಷ್ಟ್ರ ಬಂದ್​​ ವಿಚಾರದಲ್ಲಿ ಹೈಕೋರ್ಟ್​ ಮಧ್ಯಪ್ರವೇಶಿಸಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು ಬಂದ್‌ಗೆ ಕರೆ ನೀಡದಂತೆ ಶುಕ್ರವಾರ ಆದೇಶ ಹೊರಡಿಸಿದೆ. ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿದ್ದ ಪೀಠವು, ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು ಬಂದ್‌ಗೆ ಬೆಂಬಲ ನೀಡದಂತೆ ಅಥವಾ ಭಾಗವಹಿಸದಂತೆ ನಿರ್ಬಂಧಿಸುತ್ತಿರುವುದಾಗಿ ಹೇಳಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬಂದ್​ ತಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಪವಾರ್​, ಬಂದ್​ ಅನ್ನು ಹೈಕೋರ್ಟ್​ ಅಸಾಂವಿಧಾನಿಕ ಎಂದು ತೀರ್ಪು ನೀಡಿದೆ. ಸಮಯದ ಕೊರತೆ ಇರುವುದರಿಂದ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಭಾರತೀಯ ನ್ಯಾಯಾಂಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ಬಂದ್ ಕರೆಯನ್ನು ಹಿಂಪಡೆಯಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಬಂದ್ ಕರೆಯನ್ನು ಹಿಂಪಡೆದಿದ್ದು, ಪಕ್ಷದ ಕಾರ್ಯಕರ್ತರು ರಾಜ್ಯದ್ಯಂತ ಶನಿವಾರ(ಆಗಸ್ಟ್​ 24) ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ. ಕಾಂಗ್ರೆಸ್, ಶಿವಸೇನೆ (UBT) ಮತ್ತು NCP ಮೂರು ಪಕ್ಷಗಳ ನಾಯಕರು ಸಭೆ ಸೇರಿ ಬದ್ಲಾಪುರ ಶಾಲೆಯಲ್ಲಿನ ಅಪಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದ್ದರು. (ಏಜೆನ್ಸೀಸ್​​)
ರೈಲಿಗಾಗಿ ಕಾದುಕುಳಿತ ಕಿಂಗ್​ ಕೊಹ್ಲಿ; ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಗೊಂದಲ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − fourteen =
Remember me
