ಮುಂಬೈ:ದೆಹಲಿ ಚುನಾವಣೆಯಲ್ಲಿ ಸೋತ ಬಿಜೆಪಿಯ ಬಗ್ಗೆ ಎನ್​ಸಿಪಿ ಹಿರಿಯ ನಾಯಕ, ಮಹಾರಾಷ್ಟ್ರ ಸಚಿವ ನವಾಬ್​ ಮಲ್ಲಿಕ್​ ವ್ಯಂಗ್ಯವಾಡಿದ್ದಾರೆ.
ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿಗಳಿಗೆ ಮತ ಹಾಕಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉಳಿದ ಬಿಜೆಪಿ ನಾಯಕರು ದೆಹಲಿಯ ಜನರ ಬಳಿ ಚುನಾವಣಾ ಪ್ರಚಾರದ ವೇಳೆ ಮನವಿ ಮಾಡಿದ್ದರು. ಮತದಾರರು ಕೂಡ ಹಾಗೇ ನಡೆದುಕೊಂಡಿದ್ದಾರೆ. ದೇಶ ವಿರೋಧಿಗಳನ್ನು ಗೆಲ್ಲಿಸಬಾರದು ಎಂದು ಆಪ್​ಗೆ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಟೀಕಿಸಿದರು.
ಬಿಜೆಪಿಯ ದ್ವೇಷ ರಾಜಕಾರಣದಿಂದ ಜನರು ಬೇಸತ್ತಿದ್ದಾರೆ. ಆಪ್​ನ ಹಲವು ಮುಖಂಡರು, ಎಂಎಲ್​ಎ ಗಳನ್ನು ಕಾನೂನಾತ್ಮಕವಾಗಿ ಸಿಕ್ಕಿಸಲು ಬಿಜೆಪಿ ಪ್ರಯತ್ನ ಮಾಡಿತು. ಏನೇನೋ ಹೋರಾಟ ನಡೆಸಿತು. ಆದರೆ ಕೊನೆಯಲ್ಲಿ ಯಾವುದೂ ಕೆಲಸ ಮಾಡಲಿಲ್ಲ ಎಂದು ಹೇಳಿದರು.
ದೆಹಲಿಯಲ್ಲಿ ಆಮ್​ ಆದ್ಮಿ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲು ಎನ್​ಸಿಪಿ ನಿರ್ಧಾರ ಮಾಡಿದೆ. ಹಾಗೇ ಕಾಂಗ್ರೆಸ್​ ಕೂಡ ಈ ಬಗ್ಗೆ ಯೋಚಿಸಬೇಕು. ಇದರಿಂದ ಭವಿಷ್ಯದ ಚುನಾವಣೆಗಳಲ್ಲಿ ಮತ ವಿಭಜನೆ ಆಗುವುದು ತಪ್ಪುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
