ಮುಂಬೈ:ಭಾರತದ ಷೇರುಪೇಟೆ ಸೋಮವಾರ ಬೆಳಗ್ಗೆ 9.30ಕ್ಕೆ ಸೆನ್ಸೆಕ್ಸ್ 397.41 ಅಂಕಗಳ ಏರಿಕೆಯೊಂದಿಗೆ 81,730.13 ಅಂಕಗಳಲ್ಲಿ ವಹಿವಾಟು ನಡೆಸುತ್ತಿದ್ದು, ಎನ್‌ಎಸ್‌ಇ ನಿಫ್ಟಿ 125.70 ಪಾಯಿಂಟ್‌ಗಳ ಏರಿಕೆ ಕಂಡು 24,960.55 ಪಾಯಿಂಟ್‌ಗಳಿಗೆ ತಲುಪಿದೆ. ನಿಫ್ಟಿ ಐತಿಹಾಸಿಕ ಮಟ್ಟ 25 ಸಾವಿರ ಮುಟ್ಟಬಹುದು ಎನ್ನುತ್ತಾರೆ ಮಾರುಕಟ್ಟೆ ತಜ್ಞರು.
ಇದನ್ನೂ ಓದಿ:ಮಹಡಿ ಮೇಲಿಂದ ಜಿಗಿದ ಗೂಳಿ ಸ್ಟಂಟ್ಸ್ ನೋಡಿದ್ದೀರಾ..? ಕೊನೆಗೆ ಏನಾಯ್ತು?
ಎನ್‌ಟಿಪಿಸಿ, ಇಂಡಸ್‌ಇಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಸ್‌ಬಿಐ, ಇನ್ಫೋಸಿಸ್, ರಿಲಯನ್ಸ್, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್ ಇತ್ಯಾದಿಗಳು ಉತ್ತಮ ಬೆಳವಣಿಗೆಯನ್ನು ತೋರಿಸುತ್ತಿವೆ. ಟೈಟಾನ್, ಭಾರ್ತಿ ಏರ್ ಟೆಕ್, ಟೆಕ್ ಮಹೀಂದ್ರಾ, ಐಟಿಸಿ, ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಕೋಟಕ್ ಬ್ಯಾಂಕ್, ಎಚ್‌ಸಿಎಲ್ ಟೆಕ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟದಲ್ಲಿ ವಹಿವಾಟಾಗುತ್ತಿವೆ.
ದರ ಕಡಿತದಿಂದಾಗಿ ಶುಕ್ರವಾರ ಅಮೆರಿಕಾ ಮಾರುಕಟ್ಟೆಗಳು ಲಾಭದೊಂದಿಗೆ ಕೊನೆಗೊಂಡಿವೆ. ಏಷ್ಯಾದ ಮಾರುಕಟ್ಟೆಗಳು ಸೋಮವಾರ ಸಕಾರಾತ್ಮಕವಾಗಿ ವಹಿವಾಟು ನಡೆಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ತೈಲದ ಬ್ಯಾರೆಲ್ ಬೆಲೆ 81.30 ಡಾಲರ್‌ನಲ್ಲಿ ಮುಂದುವರಿದಿದ್ದರಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರ 2,546 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಇನ್ನು ದೇಶೀಯ ಸಾಂಸ್ಥಿಕ ಹೂಡಿಕೆದಾರರು ಸಹ 2,774 ಕೋಟಿ ಷೇರುಗಳನ್ನು ಖರೀದಿಸಿದ್ದು, ಏತನ್ಮಧ್ಯೆ, ಯುಎಸ್ ಫೆಡರಲ್ ರಿಸರ್ವ್ ಸಭೆಯು ಜುಲೈ 30-31 ರಂದು ನಡೆಯಲಿದೆ. ಈ ಬಾರಿಯೂ ಬಡ್ಡಿ ದರ ಹಾಗೆಯೇ ಉಳಿಯುವ ಸಾಧ್ಯತೆ ಇದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.
ttps://www.vijayavani.net/man-stole-rs-crores-was-found-with-one-lakh-and-arrest
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 3 =
Remember me
