ಪಟನಾ:ಜೆಎನ್​ಯು ಮಾಜಿ ವಿದ್ಯಾರ್ಥಿ ಮತ್ತು ಸಿಎಎ ವಿರುದ್ಧ ದೆಹಲಿಯ ಶಾಹೀನ್​ ಬಾಘ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಪ್ರಮುಖ ಸಂಘಟನಾಕಾರರಲ್ಲಿ ಒಬ್ಬನಾದ ಶಾರ್ಜಿಲ್​ ಇಮಾಮ್​ನನ್ನು​ ದೇಶದ್ರೋಹ ಪ್ರಕರಣದಡಿಯಲ್ಲಿ ಬಿಹಾರದ ಜಿಹಾನ್​ಬಾದ್​ನಲ್ಲಿ ಮಂಗಳವಾರ ಬಂಧಿಸಲಾಗಿದೆ.
ಸಿಎಎ ಕಾರಣದಿಂದಾಗಿ ಭಾರತದಿಂದ ಅಸ್ಸಾಂ ಪ್ರತ್ಯೇಕವಾಗಲಿದೆ ಎಂದು ಇಮಾಮ್​ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ್ದ. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದರ ಬೆನ್ನಲ್ಲೇ ಇಮಾಮ್​ ವಿರುದ್ಧ ದೇಶದ ಇತರೆ ಐದು ರಾಜ್ಯಗಳಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಕಳೆದ 4-5 ದಿನಗಳಿಂದ ತಲೆಮರೆಸಿಕೊಂಡಿದ್ದ ಇಮಾಮ್​ನನ್ನು ದೆಹಲಿ ಪೊಲೀಸರು ಇಂದು ಬಿಹಾರದಲ್ಲಿ ಬಂಧಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಇಮಾಮ್​ ಸಹೋದರನನ್ನು ಕೂಡ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಶಾಹೀನ್​ ಬಾಘ್​ ಪ್ರತಿಭಟನೆಯನ್ನು ಸಂಘಟಿಸಿರುವುದರಲ್ಲಿ ಇಮಾಮ್​ ಭಾಗಿಯಾಗಿದ್ದ. ಆದರೆ ಆತನ ವಿಡಿಯೋ ವೈರಲ್​ ಆದ ಬಳಿಕ ಆತ ಮುನ್ನೆಲೆಗೆ ಬಂದಿದ್ದ. ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದ ಎಂದು ಪೊಲೀಸರು ಆರೋಪಿಸಿ, ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಅಲ್ಲದೆ, ಇದಕ್ಕೂ ಮುಂಚೆ ದೆಹಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್​ನಲ್ಲೂ ಪ್ರಚೋದನಾಕಾರಿ ಭಾಷಣ ಮಾಡಿದ್ದ, ಆತನ ವಿರುದ್ಧ ದೆಹಲಿಯಲ್ಲಿ ದೂರು ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 14 =
Remember me
