ತಿರುವನಂತಪುರ:ಲವ್​ ಬ್ರೇಕಪ್​ ಮಾಡಿಕೊಳ್ಳಲು ಒಪ್ಪದ ಬಾಯ್​ಫ್ರೆಂಡ್​ಗೆ ವಿಷವುಣಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದ್ದು, ಆರೋಪಿ ಪ್ರೇಯಸಿ ಗ್ರೀಷ್ಮಾ ವಿರುದ್ಧ ಕೊಲೆಯ ಬಳಿಕ ಮತ್ತೊಂದು ದೂರು ದಾಖಲಾಗಿದೆ.
ಸುಮಾರು 8 ಗಂಟೆಗಳ ವಿಚಾರಣೆ ಬಳಿಕ ತಾನೇ ವಿಷವುಣಿಸಿ ಕೊಲೆ ಮಾಡಿದ್ದಾಗಿ ಗ್ರೀಷ್ಮಾ ತಪ್ಪೊಪ್ಪಿಕೊಂಡಿದ್ದಾಳೆ. ಇದಾ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿ, ಹೈಡ್ರಾಮ ಸೃಷ್ಟಿಸಿದ ಹಿನ್ನೆಲೆಯಲ್ಲಿ ಗೀಷ್ಮಾ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಾಗಿದೆ. ಕೇರಳದ ನೆಡುಮಂಗಡ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ ಬೆಳಗ್ಗೆ ಪೊಲೀಸ್​ ಠಾಣೆಯ ಬಾತ್​ರೂಮ್​ನಲ್ಲಿದ್ದ ಲೈಜೊಲ್​ ಕುಡಿದು ಗ್ರೀಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಲೈಜೋಲ್​ ಕುಡಿದು ತೀವ್ರ ವಾಂತಿ ಮಾಡಿಕೊಂಡ ಗ್ರೀಷ್ಮಾಳನ್ನು ತಿರುವನಂತಪುರದ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿದೆ. ಆಕೆಯ ಆರೋಗ್ಯ ಸುಧಾರಿಸಿದ ಬಳಿಕ ಅಪರಾಧ ವಿಭಾಗದ ಪೊಲೀಸರ ತಂಡ ಆಸ್ಪತ್ರೆಗೆ ತೆರಳಿ ಆರೋಪಿಯನ್ನು ಬಂಧಿಸಿದೆ. ಆಕೆಯ ಆರೋಗ್ಯವನ್ನು ಮತ್ತೊಮ್ಮೆ ಪರೀಕ್ಷಿಸಿದ ನಂತರ ಆಕೆಯನ್ನು ಜೈಲಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಾಗಿದೆ.
ಗ್ರೀಷ್ಮಾ ರಕ್ಷಣೆ ನೀಡಬೇಕಾಗಿದ್ದ ಇಬ್ಬರು ಮಹಿಳಾ ಪೇದೆ ಸರಿಯಾಗಿ ಕೆಲಸ ನಿರ್ವಹಣೆ ಮಾಡಿಲ್ಲ ಎಂಬ ಆರೋಪದ ಮೇಲೆ ಅಮಾನತಾಗಿದ್ದಾರೆ. ನೆಡುಮಂಗಡ್​ ಠಾಣೆಯ ಗಾಯತ್ರಿ ಮತ್ತು ಸುಮಾ ಹೆಸರಿನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಬಾತ್​ರೂಮ್​ಗೆ ಹೋಗಬೇಕೆಂದು ಆರೋಪಿ ಗ್ರೀಷ್ಮಾ ಸಿಬ್ಬಂದಿ ಬಳಿ ಕೇಳಿದ್ದಾಳೆ. ಬಳಿಕ ಆಕೆಯನ್ನು ಹಂಚಿಕೆ ಮಾಡಲಾಗಿದ್ದ ನಿರ್ದಿಷ್ಟ ಬಾತ್​ರೂಮ್​ಗೆ ಕರೆದೊಯ್ಯದೆ, ಹೊರಗಡೆ ಇದ್ದ ಬಾತ್​ರೂಮ್​ಗೆ ಕರೆದೊಯ್ದಿದ್ದಾರೆ. ಅವಳು ಬಾತ್​ರೂಮ್​ ಪ್ರವೇಶಿಸುವ ಮುನ್ನ ಅದನ್ನು ಪರೀಕ್ಷಿಸಿರಲಿಲ್ಲ. ಬಾತ್‌ರೂಮ್‌ಗೆ ಒಳ ಪ್ರವೇಶಿಸಿದ ಗ್ರೀಷ್ಮಾ ಅಲ್ಲಿದ್ದ ಲೈಜೋಲ್​ ಕುಡಿದು ಆತ್ಮಹತ್ಯೆ ಯತ್ನಿಸಿದ್ದಾಳೆ.
ಏನಿದು ಘಟನೆ?ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ನಿನ್ನೆ (ಅ.31) ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಅ. 14ರಂದು ಶರೋನ್​ ರಾಜ್​ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್​, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟಿದ್ದಾನೆ. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.
ಗ್ರೀಷ್ಮಾ ಮತ್ತು ರಾಜ್​ ಸುಮಾರು ಒಂದು ವರ್ಷಕ್ಕೂ ಅಧಿಕ ಸಮಯದಿಂದ ಪ್ರೀತಿಸುತ್ತಿದ್ದರು. ಈ ನಡುವೆ 2022ರ ಫೆಬ್ರವರಿಯಲ್ಲಿ ಇಬ್ಬರ ನಡುವೆ ಕೆಲವು ಸಮಸ್ಯೆಗಳು ಮೂಡಿದವು. ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಗದಿಪಡಿಸಲಾಯಿತು. ಆದಾಗ್ಯೂ, ಇಬ್ಬರು ತಮ್ಮ ಸಂಬಂಧವನ್ನು ಮುಂದುವರೆಸಿದ್ದರು. ಇತ್ತೀಚೆಗೆ ಮತ್ತೆ ಇಬ್ಬರು ಕೆಲವು ಸಮಸ್ಯೆಗಳನ್ನು ಎದುರಿಸಿದರು. ಅಂತಿಮವಾಗಿ ರಾಜ್​ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್​ ಬ್ರೇಕಪ್​ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ಇದಾದ ಬಳಿಕ ಅವನನ್ನು ಕೊಲ್ಲಲು ನಿರ್ಧರಿಸಿ, ಅಂತಿಮವಾಗಿ ವಿಷವುಣಿಸಿ ಕೊಂದೇ ಬಿಟ್ಟಳು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್​ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು.
ಶರೋನ್ ರಾಜ್​ ಅಕ್ಟೋಬರ್ 25ರಂದು ತಿರುವನಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು. ಇದು ಆತನ ಗೆಳತಿಯ ಪೂರ್ವಯೋಜಿತ ಕೊಲೆ ಎಂದು ಆತನ ಕುಟುಂಬದವರು ಆರೋಪಿಸಿ, ದೂರು ದಾಖಲಿಸಿದ್ದರು. ಆದರೆ, ಎಲ್ಲವು ಗೊತ್ತಿದ್ದರೂ ಶರೋನ್ ರಾಜ್​ ಸಾವಿಗೂ ಮುನ್ನ ಯಾರನ್ನೂ ಅನುಮಾನಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದು, ಅವರ ನಿಜವಾದ ಪ್ರೀತಿಗೆ ಕನ್ನಡಿ ಹಿಡಿದಂತಿತ್ತು. ಹೀಗಾಗಿ ಈ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಇದೀಗ 8 ಗಂಟೆಗಳ ವಿಚಾರಣೆಯ ನಂತರ ಆರೋಪಿ ಗ್ರೀಷ್ಮಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಆಕೆಯನ್ನು ತಿರುವನಂತಪುರದಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ.(ಏಜೆನ್ಸೀಸ್​)
ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ

ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಕಾರು ಅಪಘಾತ: ನಮಗಾಗಿ ಪ್ರಾರ್ಥಿಸಿ ಎಂದು ನಟಿ ರಂಭಾ ಮನವಿ

ಯಲ್ಲಾಪುರದ ಶಿವಪುರ ಗ್ರಾಮದಲ್ಲಿರುವ ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಪುಂಡರ ದುರ್ವರ್ತನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
