ನವದೆಹಲಿ:ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಜೊತೆಗೆ ಮಸೂದೆಯನ್ನು ಘೋಷಿಸದ ಕ್ರಮದಿಂದ ಹಿಂದೆ ಸರಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ಕ್ರಮದ ಕುರಿತು ಶಶಿ ತರೂರ್ ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅತಿ ಚಿಕ್ಕ ವಯಸ್ಸಿಗೆ ದುರಂತ: ಬಾಲಿವುಡ್ ಖ್ಯಾತ ನಿರ್ಮಾಪಕನ ಮಗಳು ಕ್ಯಾನ್ಸರ್​ಗೆ ಬಲಿ
“ಸಂವಿಧಾನದ ಪ್ರಕಾರ, ದೇಶದ ಪ್ರತಿಯೊಬ್ಬ ನಾಗರಿಕನಿಗೆ ದೇಶದೊಳಗೆ ಸ್ವತಂತ್ರವಾಗಿ ಬದುಕುವ, ವೃತ್ತಿ ಕೈಗೊಳ್ಳುವ ಹಾಗೂ ಸಂಚರಿಸುವ ಮುಕ್ತ ಅವಕಾಶವನ್ನೂ ನೀಡಲಾಗಿದೆ. ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂತಹ ಕಾನೂನು ಜಾರಿಗೆ ತರಲು ಮುಂದಾದರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೋಗಾಗಿ ಸಿಎಂ ಸಿದ್ದರಾಮಯ್ಯ ಬುದ್ಧಿವಂತಿಕೆಯ ನಿರ್ಧಾರವಲ್ಲ ಎಂದು ಹೇಳಿದ್ದಾರೆ.
ಹರಿಯಾಣದ ಸರ್ಕಾರವೊಂದು ಇದೇ ವಿಧೇಯಕವನ್ನು ಮಂಡಿಸಲು ಯತ್ನಿಸಿದಾಗ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು ಎಂದು ಅವರು ಹೇಳಿದರು.ಇಂಥದ್ದೇ ಪ್ರಯತ್ನಕ್ಕೆ ಕೈ ಹಾಕಿದ್ದ ಹರಿಯಾಣದ ಸರ್ಕಾರದ ಮಸೂದೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ‘ಕರ್ನಾಟಕ ಇಂಥದ್ದೊಂದು ಯತ್ನಕ್ಕೆ ಏಕೆ ಕೈ ಹಾಕಿತು ಎಂಬದು ಅರ್ಥವಾಗುತ್ತಿಲ್ಲ. ಸರ್ಕಾರ ಇಂತಹ ಕಾನೂನು ಜಾರಿಯಾದರೆ ಇಲ್ಲಿನ ವಹಿವಾಟು ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳದಂತಹ ರಾಜ್ಯಗಳಿಗೆ ಸ್ಥಳಾಂತರಗೊಳ್ಳಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೈಗಾರಿಕೆ, ಕಾರ್ಖಾನೆಗಳು ಸೇರಿ ಕರ್ನಾಟಕದಲ್ಲಿ ಖಾಸಗಿ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ.50 ರಿಂದ ಶೇ.75ರ ವರೆಗೆ ಉದ್ಯೋಗ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದ ವಿಧೇಯಕವನ್ನ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು. ಕನ್ನಡಿಗರಿಗೆ ಭಾರತದ ಐಟಿ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗೆ 50%,ಆಡಳಿತೇತರ ಹುದ್ದೆಗೆ 75% ಮೀಸಲಾತಿ ಕೊಡಬೇಕೆಂದು ಮಸೂದೆಯಲ್ಲಿ ತಿಳಿಸಲಾಗಿತ್ತು.
“ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು, ಆದ್ರೆ….” ವಿಚ್ಛೇದನ ಖಚಿತಪಡಿಸಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + four =
Remember me
