ನವದೆಹಲಿ:ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನೂತನ ಕೋಚ್​ ಗೌತಮ್​ ಗಂಭೀರ್​ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸುತ್ತಿದ್ದಂತೆ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತಿವಾಗುತ್ತಿದ್ದು, ಹಲವರು ನೂತನ ಕೋಚ್​ ಗಂಭೀರ್ ಹಾಗೂ ಆಯ್ಕೆ ಸಮಿತಿ ಸದಸ್ಯರ ವಿರುದ್ಧ ಕಿಡಿಕಾರಿದ್ದಾರೆ.
ಇತ್ತೀಚಿಗೆ ಜಿಂಬಾಬ್ವೆ ವಿರುದ್ಧ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಶತಕ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಸಂಜು ಸ್ಯಾಮ್ಸನ್​ ಹಾಗೂ ಅಭಿಷೇಕ್​ ಶರ್ಮರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆ ಬಿಸಿಸಿಐ ಆಯ್ಕೆ ಮಾಡಿಲ್ಲ. ಈ ಬಗ್ಗೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವರು ಕಿಡಿಕಾರಿದ್ದು, ಈ ಬಗ್ಗೆ ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
Interesting squad selection for India’s tour of Sri Lanka later this month.@IamSanjuSamson, who hit a century in his last ODI, has not been picked for ODIs, while@IamAbhiSharma4, who hit a T20I century in the#INDvZIMseries, has not been picked at all. Rarely has success in…pic.twitter.com/PJU5JxSOx2
ಇದನ್ನೂ ಓದಿ:ಲಂಡನ್​ನ ಬೀದಿಯಲ್ಲಿ ಪತ್ನಿ-ಮಗನೊಂದಿಗೆ ವಿರಾಟ್​ ಶಾಪಿಂಗ್​; ವಿಡಿಯೋ ವೈರಲ್
ಈ ತಿಂಗಲಾಂತ್ಯದಲ್ಲಿ ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆ ಬಹಳ ಕುತುಹಲಕಾರಿಯಾಗಿದೆ. ಇತ್ತೀಚಿನ ಸರಣಿಯಲ್ಲಿ ಶತಕ ಬಾರಿಸಿದ್ದ ಆಟಗಾರರಾದ ಸಂಜು ಸ್ಯಾಮ್ಸನ್​ ಹಾಗೂ ಅಭಿಷೇಕ್​ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಇಂತಹ ಪ್ರತಿಭಾನ್ವಿತರು ಆಯ್ಕೆಗಾರರ ಕಣ್ಣಿಗೆ ಕಾಣಲಿಲ್ವಾ ಎಂಬುದು ನನ್ನ ಪ್ರಶ್ನೆಯಾಗಿದೆ. ಹೇಗಿದ್ದರೂ ತಂಡಕ್ಕೆ ಶುಭವಾಗಲಿ ಎಂದು ಕಾಂಗ್ರೆಸ್​ ಸಂಸದ ಶಶಿ ತರೂರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆ ಟಿ20 ಮಾದರಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ತಂಡದ ನಾಯಕತ್ವವನ್ನು ರೋಹಿತ್​ ಶರ್ಮಾ ಅವರಿಗೆ ವಹಿಸಲಾಗಿದೆ. ರೋಹಿತ್​ ಶರ್ಮ ಹಾಗೂ ವಿರಾಟ್​ ಕೊಹ್ಲಿ ಅವರಿಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಈ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ರೋಹಿತ್​ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 2 =
Remember me
