ಬೆಂಗಳೂರು:ಪ್ರೀತಿಗೆ ಜಾತಿ, ದೇಶದ ಗಡಿ, ಧರ್ಮಗಳ ಯಾವುದೇ ಗಡಿ ಇಲ್ಲ ಎನ್ನುವುದು ಹಲವು ಬಾರಿ ಸಾಬೀತು ಆಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸೀಮಾ ಹೈದರ್​,  ಅಂಜು ಲವ್​ ಸ್ಟೋರಿಗಳು ದೇಶದ ಗಡಿ ದಾಟಿದ್ದು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಅಪರೋದ ಲವ್​ ಸ್ಟೋರಿ ಭಾರತಕ್ಕೂ ಜರ್ಮನಿಗೂ ಸಂಬಂಧ ಬೆಸೆದಿದೆ.
ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯ ವಿವಾಹವೂ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು.
ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್  ದಂಪತಿ ಪುತ್ರಿ ಕಾರಿನ್​​ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.
ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು, ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದರು. ಹಿಂದೂ ಸಂಪ್ರದಾಯದಂತೆ ಜ.1ರಂದು  ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು -ಮಿತ್ರರು ವಿವಾಹದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭಕೋರಿದ್ದಾರೆ.
ಸಿಎಂ ಜಗನ್​ ವಿರುದ್ಧ ಸಿಡಿದೆದ್ದ ಸಹೋದರಿ; ರಾಜಕೀಯ ಅಖಾಡದಲ್ಲಿ ಅಣ್ಣಾ- ತಂಗಿ ಜಟಾಪಟಿ ಶುರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 8 =
Remember me
