ನವದೆಹಲಿ:ಸುಷ್ಮಾ ಸ್ವರಾಜ್​ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡ ಮೇಲೆ ಅದರ ಕಾರ್ಯವೈಖರಿಯೇ ಬದಲಾಗಿತ್ತು. ಆ ಇಲಾಖೆಗೆ ಮಾನವೀಯತೆಯ ಸ್ಪರ್ಶ ಕೊಟ್ಟವರು ಅವರು. ಜಗತ್ತಿನ ವಿವಿಧ ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದರು.
ಕಳೆದ ವರ್ಷ ಸುಷ್ಮಾ ಸ್ವರಾಜ್​ ಅವರು ಮೃತಪಟ್ಟಾಗ ಪಾಕಿಸ್ತಾನದ ವಿದೇಶಾಂಗ ಸಚಿವರಿಂದ ಹಿಡಿದು ಹಲವು ರಾಷ್ಟ್ರಗಳ ಪ್ರಮುಖರು, ಭಾರತದಲ್ಲಿರುವ ವಿದೇಶಿ ರಾಯಭಾರಿಗಳು ಸಂತಾಪ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದರು. ಸುಷ್ಮಾ ಸ್ವರಾಜ್​ ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದರು.ಇದನ್ನೂ ಓದಿ:ಸುಷ್ಮಾ ಸ್ವರಾಜ್​ ಮೊದಲ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪ್ರಧಾನಿ ಮೋದಿ…
ಸುಷ್ಮಾ ಸ್ವರಾಜ್​ ಮೃತಪಟ್ಟು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಮಾಲ್ಡೀವ್ಸ್​ ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ಲಾ ಶಾಹೀದ್​ ಅವರು ಟ್ವೀಟ್​ ಮೂಲಕ ಸುಷ್ಮಾ ಸ್ವರಾಜ್​​ರನ್ನು ನೆನಪಿಸಿಕೊಂಡಿದ್ದಾರೆ. ವಿಡಿಯೋವೊಂದನ್ನು ಶೇರ್​ ಮಾಡಿಕೊಂಡ ಅವರು, ಭಾರತದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರಿಗೆ ಗೌರವ ಅರ್ಪಿಸುತ್ತಿದ್ದೇನೆ. ಅವರು ನನ್ನ ಉತ್ತಮ ಸ್ನೇಹಿತೆಯಾಗಿದ್ದರು. ಹಾಗೇ ರಾಜತಾಂತ್ರಿಕತೆಯಲ್ಲಿ ಮಹಾನ್​ ಶಕ್ತಿಯಾಗಿದ್ದರು. ಭಾರತ-ಮಾಲ್ಡೀವ್ಸ್​ ನಡುವಿನ ಪಾಲುದಾರಿಕೆ, ಸಂಬಂಧವನ್ನು ಬಲಪಡಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಶ್ಲಾಘನೀಯ ಪ್ರಯತ್ನಗಳನ್ನು ಮಾಡಿದ್ದರು ಎಂದು ಅಬ್ದುಲ್ಲಾ ಶಾಹೀದ್​ ಹೇಳಿದ್ದಾರೆ. (ಏಜೆನ್ಸೀಸ್​)
I pay tribute to former Min. of External Affairs of#India, Late Smt.#SushmaSwarajon the first anniversary of her death.She was a great friend and an unstoppable force in diplomacy. Her crucial role in strengthening 🇲🇻 – 🇮🇳 partnership will always be remembered & appreciated.pic.twitter.com/2mZqxHHKcu
— Abdulla Shahid (@abdulla_shahid)August 6, 2020

ಹೊಸ ಶಿಕ್ಷಣ ನೀತಿ ಹೇಗಿರಲಿದೆ? ಪ್ರಧಾನಿಯಿಂದ ನಾಳೆ ಸಂಪೂರ್ಣ ವಿವರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
