ಮುಂಬೈ:ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕರೊನಾ ವೈರಸ್​ ವಿತರಿಸುವುದಾಗಿ ಹೇಳಿರುವ ಬಿಜೆಪಿ ವಿರುದ್ಧ ಶಿವಸೇನಾ ಪಕ್ಷ ಹರಿಹಾಯ್ದಿದ್ದು, ಬಿಹಾರ ಹೊರತು ಪಡಿಸಿ ಉಳಿದ ರಾಜ್ಯಗಳೇನೂ ಪಾಕಿಸ್ತಾನವಲ್ಲ. ಪ್ರಣಾಳಿಕೆ ಮೂಲಕ ಬಿಜೆಪು ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕೋವಿಡ್​-19 ಲಸಿಕೆ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಟೀಕಿಸಿದೆ. ಬಿಹಾರವು ಕರೊನಾ ಲಸಿಕೆಯನ್ನು ಪಡೆದುಕೊಳ್ಳಲಿ ಆದರೆ, ದೇಶದ ಉಳಿದ ರಾಜ್ಯಗಳೇನೂ ಪಾಕಿಸ್ತಾನವಲ್ಲ. ಲಸಿಕೆ ವಿಚಾರದಲ್ಲಿ ಎಲ್ಲ ರಾಜ್ಯಗಳಿಗೂ ಸಮಾನ ಹಕ್ಕಿದೆ ಎಂದು ಬಿಜೆಪಿ ನಡೆಯನ್ನು ಟೀಕಿಸಿದೆ.
ಇದನ್ನೂ ಓದಿ:ದಂತದಿಂದ ಕಾಡಾನೆ ತಿವಿಯುತ್ತಿದ್ದರೂ ಅಸಹಾಯಕನಾಗಿ ಪ್ರಾಣಬಿಟ್ಟ ಆನೆರಂಗ
ಇಡೀ ದೇಶವೇ ಕರೊನಾ ವೈರಸ್​ನಿಂದ ತತ್ತರಿಸಿರುವಾಗ ಬಿಜೆಪಿ ಲಸಿಕೆ ವಿಚಾರದಲ್ಲಿ ಕೀಳು ಮಟ್ಟದ ರಾಜಕೀಯಕ್ಕೆ ಕೈಹಾಕಿದೆ. ಲಸಿಕೆ ಸಿದ್ಧಪಡಿಸಿದ ಬೆನ್ನಲ್ಲೇ ಯಾವುದೇ ಧರ್ಮ-ಜಾತಿಯನ್ನು ನೋಡದೆ ಎಲ್ಲರಿಗೂ ಸಮಾನವಾಗಿ ಲಸಿಕೆ ಹಂಚುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದರೆ, ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರಕ್ಕೆ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ. ಬಿಜೆಪಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ? ಅವರ ನಾಯಕತ್ವದಲ್ಲಿ ಏನು ತಪ್ಪಾಗಿದೆ? ಅಧಿಕಾರಕ್ಕೆ ಏನು ಬೇಕಾದರೂ ಮಾಡುತ್ತೀರಿ ಎಂದು ಶಿವಸೇನಾ ಕಿಡಿಕಾರಿದೆ.
ಇಷ್ಟೇ ಅಲ್ಲದೆ ಇತ್ತೀಚೆಗೆ ಬಿಹಾರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಾಮಾಜಿಕ ಅಂತರ ಸೇರಿದಂತೆ ಕರೊನಾ ನಿಯಮ ಉಲ್ಲಂಘನೆ ಮಾಡಿದ್ದರ ಬಗ್ಗೆಯೂ ತೀವ್ರ ವಾಗ್ದಾಳಿ ನಡೆಸಿದೆ.(ಏಜೆನ್ಸೀಸ್​)
ಬಿಎಸ್​ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಸುಲಭವೇ?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:12 − 11 =
Remember me
