ಮುಂಬೈ:ಬಿಜೆಪಿ ದೆಹಲಿ ಚುನಾವಣೆ ಎದುರಿಸಲು “ಕೋಮು ಧ್ರುವೀಕರಣ”ಕ್ಕೆ ಕೈ ಹಾಕಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಬರೆದುಕೊಂಡಿದೆ.
ದೆಹಲಿ ವಿಧಾನಸಭೆ ಚುನಾವಣೆಯ ಮತದಾನಕ್ಕೆ 2 ದಿನ ಇರುವಾಗ ಬರೆದಿರುವ ಸಂಪಾದಕೀಯ ಚರ್ಚೆಗೆ ಗ್ರಾಸವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಷಾ ಅವರು ಮಹಾರಾಷ್ಟ್ರ ಕಳೆದುಕೊಂಡ ನಂತರ ಮತ್ತು ಜಾರ್ಖಂಡ್​ನಲ್ಲಿ ಸೋಲು ಅನುಭವಿಸಿದ ಬಳಿಕ ದೆಹಲಿಯಲ್ಲಿ ಗೆಲ್ಲಲು ಪಣ ತೊಟ್ಟಿದ್ದಾರೆ. ಅವರು ಗೆಲ್ಲಲು ತೊಟ್ಟಿರುವ ಪಣ ತಪ್ಪಲ್ಲ. ಬಿಜೆಪಿಯ 200 ಸಂಸದರು, ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಇಟ್ಟು ತೂಗಿದರು ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರಷ್ಟು ಭಾರ ತೂಗುವುದಿಲ್ಲ ಎಂದು ತೀಕ್ಷ್ಣವಾಗಿ ಸಂಪಾದಕೀಯದಲ್ಲಿ ಬರೆಯಲಾಗಿದೆ.
ದೆಹಲಿ ಸಿಎಂ ಕೇಜ್ರಿವಾಲ್​ 5 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿ ಮುಂದಿಟ್ಟು ಮತ ಯಾಚಿಸುತ್ತಿದ್ದರೆ, ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸೇರಿದಂತೆ ಇತರೆ ವಿಚಾರಗಳನ್ನು ಮುಂದಿಟ್ಟು ಪ್ರಚಾರ ನಡೆಸುತ್ತಿದೆ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − eighteen =
Remember me
