ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವತ್ಮಾಲ್-ವಾಶಿಮ್‌ ಲೋಕಸಭಾ ಕ್ಷೇತ್ರದ ಶಿವಸೇನೆ ಸಂಸದೆ ಭಾವನಾ ಗವಲಿ ಅವರ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಇಡಿ ಅಧಿಕಾರಿಗಳು ಸಂಸದೆಯ ಆಪ್ತ ಸಹಾಯಕ ಶಾಹಿದ್ ಖಾನ್​​ನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಭಾವನಾ ಗವಲಿ ಅವರ ಹೆಸರು ಬಂಧಿತ ಆರೋಪಿ ಶಾಹಿದ್ ಜೊತೆ ತಳಕು ಹಾಕಿಕೊಂಡಿದೆ. ಈತ 17 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ.
ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಹಣ ದಂಧೆ ಮಾಡುತ್ತಿದ್ದ ಆರೋಪಿ ಶಾಹಿದ್ ಖಾನ್​ಗೆ ಸಹಕಾರ ನೀಡಿದ್ದಾರೆ ಎಂಬ ಆರೋಪವನ್ನು ಸಂಸದೆ ಎದುರಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಆರೋಪಿತರು 43 ಕೋಟಿ ರೂ. ಹಣವನ್ನು ಸಾಲ ಪಡೆದು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಮುಂಬೈ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು.

ಹಾಸನಾಂಬ ದೇವಿ ಭಕ್ತಾದಿಗಳಿಗೆ ಸಿಹಿಸುದ್ದಿ, ನಿಗದಿಯಾಯ್ತು ದರ್ಶನ ದಿನಾಂಕ….
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
