ಅಮೃತಸರ:ಶಿವಸೇನೆ ನಾಯಕ ಸುಧೀರ್​ ಸುರಿಯನ್ನು ಪಂಜಾಬ್​ನ ಅಮೃತಸರದಲ್ಲಿ ಇಂದು (ನ.4) ಭೀಕರವಾಗಿ ಗುಂಡಿಟ್ಟು ಕೊಲ್ಲಲಾಗಿದೆ.
ಅಮೃತಸರದ ಗೋಪಾಲ ಮಂದಿರದ ಬಳಿಯಲ್ಲಿ ನಡೆದ ಸಂಘರ್ಷದಲ್ಲಿ ಸುಧೀರ್​ ಸುರಿ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಅವರನ್ನು ಕಾಪಾಡಲು ಸಾಧ್ಯವಾಗಿಲ್ಲ. ಘಟನೆಯ ಸ್ಥಳಕ್ಕೆ ತಕ್ಷಣ ಧಾವಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನೂ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ಅಮೃತಸರದ ಕಮಿಷನರ್ ಅರುಣ್ ಪಾಲ್​ ಸಿಂಗ್ ‘ಸುಧೀರ್​ ಸುರಿಯ ಮೇಲೆ ಗೋಪಾಲ ಮಂದಿರದ ಹೊರಗೆ ಗುಂಡಿನ ದಾಳಿ ನಡೆದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೊನೆಯುಸಿರು ಎಳೆದಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ಆಯುಧಗಳನ್ನು ವಶಕ್ಕೆ ಪಡೆದಿದ್ದೇವೆ’ ಎಂದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
