ನಾಶಿಕ್​:ಕರ್ತವ್ಯನಿರತ ಪೊಲೀಸ್​ ಇನ್ಸ್​ಪೆಕ್ಟರ್​​ ಠಾಣೆಯಲ್ಲೇ ಸರ್ವೀಸ್​ ರಿವಾಲ್ವರ್​ನಿಂದ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಶಿಕ್​ ನಗರದಲ್ಲಿ ಮಂಗಳವಾರ (ಫೆ.20) ಬೆಳಗ್ಗೆ ನಡೆದಿದೆ.
ಮೃತ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ಅಶೋಕ್​ ನಾಜನ್ ಎಂದು ಗುರುತಿಸಲಾಗಿದೆ​. ನಾಶಿಕ್​ ನಗರದ ಅಂಬಾದ್​ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಗ್ಗೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ತಲೆಯಲ್ಲಿ ಬುಲೆಟ್​ ಗಾಯದೊಂದಿಗೆ ಅವರ ಟೇಬಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಘಟನೆ ನಾಶಿಕ್​ ನಗರದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ನಾಜನ್​ ಅವರು ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೇಕೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದಾಗ್ಯೂ, ಈ ವಿಚಾರದಲ್ಲಿ ಪೊಲೀಸ್​ ತನಿಖೆ ಆರಂಭವಾಗಿದೆ.
ನಾಜನ್​ ಮೃತಪಟ್ಟ ಸಂಗತಿ ತಿಳಿಯುತ್ತಿದ್ದಂತೆ ನಾಶಿಕ್​ ಪೊಲೀಸ್​ ಕಮಿಷನರ್​ ಸಂದೀಪ್​ ಕಾರ್ಣಿಕ್​ ಮತ್ತು ಕ್ರೈ ಬ್ರಾಂಚ್​ ಅಸಿಸ್ಟಂಟ್​ ಪ್ರಶಾಂತ್​ ಬಚ್ಚೋ ಅಂಬಾದ್​ ಪೊಲೀಸ್​ ಠಾಣೆಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.(ಏಜೆನ್ಸೀಸ್​)
ನೀನು ಯಾವ… ನಟ ದರ್ಶನ್ ಆಡಿದ ಆ ಒಂದು ಮಾತಿಗೆ​ ಕೆರಳಿ ಕೆಂಡವಾದ ಅಹೋರಾತ್ರ, ಅಶ್ಲೀಲ ಪದ ಬಳಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × three =
Remember me
