ಹಿಂದೂಪುರ:ಕಸಾಯಿಖಾನೆಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ನಿರಾಕಸಿದ ಎಂಬ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಹಿಂದೂಪುರದಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬರುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂತ್ರಸ್ತ ವಾಜಿದ್​ನನ್ನು ಕಸಾಯಿಖಾನೆ ಮಾಲೀಕರು ಎಮ್ಮೆಯನ್ನು ಕಡಿಯುವಂತೆ ಹೇಳಿ ಕರೆಸಿಕೊಂಡಿದ್ದರು. ಬಳಿಕ ಗೋವುಗಳನ್ನು ಹತ್ಯೆ ಮಾಡುವಂತೆ ಸೂಚಿಸಿದ್ದಾರೆ. ಗೋವುಗಳನ್ನು ಅನೇಕರು ಪೂಜಿಸುತ್ತಾರೆ. ಆದ್ದರಿಂದ ನಾನು ಯಾವುದೇ ಕಾರಣಕ್ಕೂ ಹತ್ಯೆ ಹಸುಗಳನ್ನು ಕಡಿಯುವುದಿಲ್ಲ ಎಂದು ಹೇಳಿ ಅಲ್ಲಿಂದ ಹೊರ ಬಂದಿದ್ದಾನೆ.
ఆవుల్ని వధించనని చెప్పినందుకు స్తంభానికి కట్టేసి చావ బాదారు!శ్రీ సత్యసాయి జిల్లా హిందూపురంలో అక్రమంగా నడుపుతున్న కబేళాలో పశువులను వధించాలని పరిగికి చెందిన వాజిద్‌ను తీసుకెళ్లిన నిర్వాహకులు.కాని అక్కడ ఎద్దులకు బదులు ఆవులు కనిపించడంతో వాటిని వధించేందుకు వాజిద్ నిరాకరించాడు.…pic.twitter.com/lGonvGKzB5
ಇದನ್ನೂ ಓದಿ:ಧೋನಿ ನೀಡಿದ ಆ ಸಲಹೆ ಚೆನ್ನೈ ವಿರುದ್ಧ ಗೆಲ್ಲಲು ಸಹಕಾರಿಯಾಯ್ತು: ಮಾರ್ಕಸ್​ ಸ್ಟೋಯಿನಿಸ್
ಇದರಿಂದ ಕುಪಿತಗೊಂಡ ಕಸಾಯಿಖಾನೆ ಮಾಲೀಕರು ಆತನನ್ನು ಫೋನ್​ ಕದ್ದಿದ್ದಾನೆ ಎಂದು ಆರೋಪಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏತನ್ಮಧ್ಯೆ, ಮಾನವ ಹಕ್ಕುಗಳ ಸಂಘಟನೆಗಳು ಮತ್ತು ಸ್ಥಳೀಯ ಸಂಘಟನೆಗಳು ಈ ಅಮಾನವೀಯ ಕೃತ್ಯವನ್ನು ಖಂಡಿಸಿದ್ದು, ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವವರಿಗೆ ಮತ್ತು ವಾಜಿದ್ ಮೇಲಿನ ಹಲ್ಲೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + 3 =
Remember me
