ಇಂದೋರ್:ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆ ಜನರನ್ನು ಹೆಚ್ಚಾಗಿ ಬಾಧಿಸುತ್ತಿದ್ದು, ಎಷ್ಟೇ ಮುನ್ನೆಚ್ಚರಿಕೆ ವಹಿಸಿದರು ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ನಿವೃತ್ತ ಸೈನಿಕರೊಬ್ಬರು ವೇದಿಕೆ ಮೇಲೆ ಡ್ಯಾನ್ಸ್​​ ಮಾಡುವಾದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಮಕ್ಕಳು ಇವರು ನೃತ್ಯ ಮಾಡುತ್ತಿದ್ದಾರೆ ಎಂದು ಭಾವಿಸಿ ಚಪ್ಪಾಳೆ ತಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಘಳಲ್ಲಿ ವೈರಲ್​ ಆಗಿದೆ.
ಮಧ್ಯಪ್ರದೇಶದ ಇಂದೋರ್​ನ ಶಾಲೆ ಒಂದರ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ನಿವೃತ್ತ ಯೋಧ ಬಲ್ವಿಂದರ್​ ಸಿಂಗ್ ಛಾಬ್ರಾ​ ಎಂದು ಗುರುತಿಸಲಾಗಿದೆ. ಇವರಿಗೆ 2008ರಲ್ಲಿ ಬೈಪಾಸ್​ ಸರ್ಜರಿ ಆಗಿತ್ತು ಎಂದು ತಿಳಿದು ಬಂದಿದೆ.
साइलेंट अटैक, इंदौर में देशभक्ति का गीत गाते गाते रिटायर्ड फ़ौजी बलबिंदर छावड़ा को आया जानलेवा दिल का दौरा, बच्चे तालियाँ बजाते रहे, अस्पताल ले जाते दम तोड़@VistaarNewspic.twitter.com/CoJGyUGuQR
ಇದನ್ನೂ ಓದಿ:ಈತ ಟೀಮ್​ ಇಂಡಿಯಾದ ಕ್ರಿಸ್​ ಗೇಲ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ; ಮಾಜಿ ಕ್ರಿಕೆಟಿಗನ ಹೇಳಿಕೆ ವೈರಲ್
ನಿವೃತ್ತಿಯ ಬಳಿಕ ಬಲ್ವಿಂದರ್​ ಸಿಂಗ್​ ಛಾಬ್ರಾ ಅವರು ಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಅದೇ ರೀತಿ ಶುಕ್ರವಾರ (ಮೇ 31) ಇಂದೋರ್​ನಲ್ಲಿರುವ ಪ್ರತಿಷ್ಠಿತ ಶಾಲೆ ಒಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಮೇಲೆ ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ಇದನ್ನೂ ನೋಡಿದ ವಿದ್ಯಾರ್ಥಿಗಳು ಡ್ಯಾನ್ಸ್​ ಮಾಡುತ್ತಿದ್ದಾರೆ ಎಂದು ಭಾವಿಸಿ ಚಪ್ಪಾಳೆ ತಟ್ಟಲು ಶುರು ಮಾಡಿದ್ದಾರೆ. ಬಳಿಕ ಪರಿಶೀಲಿಸಿದಾಗ ಅವರು ಪ್ರಜ್ಞೆ ಕಳೆದುಕೊಂಡಿರುವುದನ್ನು ಶಾಲೆಯ ಸಿಬ್ಬಂದಿ ಗಮನಿಸಿದ್ದಾರೆ
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬಲ್ವಿಂದರ್​ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ವಿಚಾರವನ್ನು ಶಾಲೆಯ ಸಿಬ್ಬಂದಿ ಕೂಡಲೇ ಅವರ ಕುಟುಂಬಸ್ಥರಿಗೆ ತಿಳಿಸಿದ್ದು, ಕುಟುಂಬದ ಸದಸ್ಯರು ಅವರ ಅಂಗಾಂಗ ಹಾಗೂ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಲ್ವಿಂದರ್​ ಅವರ ನೃತ್ಯದ ವಿಡಿಯೋ ನೋಡಿ ಹಲವರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
