ಕೋಲ್ಕತಾ:ಕೋಲ್ಕತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ವೇಳೆ ಸಿಬಿಐನ ತನಿಖಾಧಿಕಾರಿಯ ಗೈರುಹಾಜರಿ ಮತ್ತು ಸಂಸ್ಥೆಯ ವಕೀಲರು ಬರಲು 40 ನಿಮಿಷ ತಡ ಮಾಡಿರುವುದು ನ್ಯಾಯಾಲಯದಿಂದ ತೀವ್ರ ಟೀಕೆಗೆ ಕಾರಣವಾಯಿತು.
ಇದನ್ನೂ ಓದಿ:ಕೋಲ್ಕತಾ ಟ್ರೈನಿ ವೈದ್ಯೆ ರೇಪ್‌, ಕೊಲೆ: ಪಾಲಿಗ್ರಾಫ್ ಪರೀಕ್ಷೆ ವೇಳೆ ಅಪರಾಧದಲ್ಲಿ ಭಾಗಿಯಾಗಿಲ್ಲ ಎಂದ ಆರೋಪಿ
ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ವಿಚಾರಣೆ ನಡೆಯಿತು. ಆದರೆ, ಸಿಬಿಐನ ತನಿಖಾಧಿಕಾರಿ ಕೋರ್ಟ್‌ನಲ್ಲಿ ಹಾಜರಿರಲಿಲ್ಲ. ಇತ್ತ ತನಿಖಾ ಸಂಸ್ಥೆಯ ವಕೀಲರು 40 ನಿಮಿಷ ತಡವಾಗಿ ಹಾಜರಾದರು. ಇದರಿಂದ ಆಕ್ರೋಶಗೊಂಡ ಕೋರ್ಟ್​, ಪ್ರಕರಣದ ಪ್ರಮುಖ ಆರೋಪಿಗೆ ಜಾಮೀನು ನೀಡಬೇಕೆ ಎಂದು ಗರಂ ಆಯಿತು. ತನಿಖಾ ಸಂಸ್ಥೆಯ ಈ ನಡೆ ಆಲಸ್ಯ ಮನೋಭಾವವನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಪ್ರಕರಣದಲ್ಲಿ ಬಂಧಿತನಾಗಿರುವ ಸಂಜಯ್‌ ರಾಯ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಆರೋಪಿ ರಾಯ್ ಪರ ವಕೀಲರು ಜಾಮೀನಿಗಾಗಿ ವಾದ ಮಂಡಿಸುತ್ತಿದ್ದಂತೆ, ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಪಮೇಲಾ ಗುಪ್ತಾ ಅವರಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ತಡವಾಗಿ ಬರುತ್ತಾರೆ ಎಂದು ತಿಳಿಸಲಾಯಿತು. ಅದಕ್ಕೆ ಮ್ಯಾಜಿಸ್ಟ್ರೇಟ್, ನಾನು ಸಂಜಯ್ ರಾಯ್‌ಗೆ ಜಾಮೀನು ನೀಡಬೇಕೇ? ಇದು ಸಿಬಿಐನ ಆಲಸ್ಯ ವರ್ತನೆ ತೋರಿಸುತ್ತದೆ. ಇದು ಅತ್ಯಂತ ದುರದೃಷ್ಟಕರ ಎಂದು ಗರಂ ಆದರು. ಎರಡೂ ಕಡೆಯವರ ವಾದ ಆಲಿಸಿದರು ನ್ಯಾಯಾಲಯ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಮಾಡಿತು.
ಟ್ರೈನಿ ವೈದ್ಯೆಯ ಅತ್ಯಾಚಾರ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದ ಆರೋಪಿ:ಕೋಲ್ಕತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಶಂಕಿತ ಸಂಜಯ್ ರಾಯ್, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಆತ ತಾನು ಯಾವುದೇ ಅಪರಾಧ ಕತ್ಯದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿರುವುದಾಗಿ ಎಂದು ವರದಿಯಾಗಿದೆ. ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯಯ ಶವವನ್ನು ನೋಡಿದ ನಂತರ ಸಂಜಯ್ ರಾಯ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಸಂಜಯ್ ರಾಯ್​ಗೆ ಪಾಲಿಗ್ರಾಫ್ ಪರೀಕ್ಷೆಯಲ್ಲಿ ಸಿಬಿಐ 10 ಪ್ರಶ್ನೆಗಳನ್ನು ಕೇಳಿದೆ. ತನಿಖಾ ಸಂಸ್ಥೆಯ ತನಿಖಾಧಿಕಾರಿಯೊಂದಿಗೆ ಮೂವರು ಪಾಲಿಗ್ರಾಫ್ ತಜ್ಞರು ಪರೀಕ್ಷೆಯಲ್ಲಿ ಹಾಜರಿದ್ದರು. ಕೋಲ್ಕತಾ ಪೊಲೀಸ್​​ನ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರು ಆಗಸ್ಟ್ 10 ರಂದು ಆತನನ್ನು ಬಂಧಿಸಿದಾಗ ಆತ ಅಪರಾಧವನ್ನು ಒಪ್ಪಿಕೊಂಡಿದ್ದ. ಆದಾಗ್ಯೂ, ನಂತರ ಅವರು ತಮ್ಮ ತಪ್ಪೊಪ್ಪಿಗೆಯನ್ನು ಹಿಂತೆಗೆದುಕೊಂಡಿದ್ದಾರೆ. ನಾನು ನಿರಪರಾಧಿ ಎಂದು ಹೇಳಿದ್ದಾನೆ.
ವಿಶ್ವ ಕುಸ್ತಿ ಚಾಂಪಿಯನ್‌ಶಿಪ್​ನಲ್ಲಿ ಬೆಳ್ಳಿ, ಕಂಚಿನ ಪದಕ ಗೆದ್ದ ನಿಕಿತಾ, ನೇಹಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
