ನವದೆಹಲಿ:ಕರೊನಾ ಸೋಂಕು ಕಡಿಮೆಯಾಗುಷ್ಟರಲ್ಲೇ ಕರೊನಾ ರೂಪಾಂತರಿ ಆವರಿಸಿಕೊಳ್ಳಲಾರಂಭಿಸಿದೆ. ಅದರ ಬೆನ್ನಲ್ಲೇ ಹಕ್ಕಿ ಜ್ವರವೂ ಕಾಣಿಸಿಕೊಳ್ಳಲಾರಂಭಿಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜಸ್ಥಾನ, ಕೇರಳ, ಮಧ್ಯಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಾಖಲಾಗಲಾರಂಭಿಸಿದ್ದು, ಜನರು ಚಿಕನ್​ ತಿನ್ನಲು ಹಿಂದೇಟು ಹಾಕುವಂತಾಗಿದೆ.
ಇದನ್ನೂ ಓದಿ:ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?
ಸಾಮಾನ್ಯವಾಗಿ ಹಕ್ಕಿ ಜ್ವರ ಕಾಣಿಸಿಕೊಂಡಾಗ ಚಿಕನ್​ ತಿನ್ನದಿರುವಂತೆ ಸೂಚನೆ ನೀಡಲಾಗುತ್ತದೆ. ಕೋಳಿಯಲ್ಲಿ ಹಕ್ಕಿ ಜ್ವರವಿದ್ದು, ಅದನ್ನು ನಾವು ಸೇವಿಸಿದರೆ ನಮಗೂ ಆ ರೋಗ ಅಂಟುವ ಸಾಧ್ಯತೆಯಿರುವುದರಿಂದಾಗಿ ಚಿಕನ್​ ತಿನ್ನಬೇಡಿ ಎಂದು ಹೇಳಲಾಗುತ್ತದೆ. ಅದೇ ಹಿನ್ನೆಲೆಯಲ್ಲಿ ಕೋಳಿ ಸಾಕಾಣಿಕೆ ಮಾಡಿದ ಅದೆಷ್ಟೋ ಜನ ಸಾವಿರಾರು ಕೋಳಿಗಳನ್ನು ಜೀವಂತ ಸಮಾಧಿ ಮಾಡಿರುವ ಪ್ರಕರಣಗಳನ್ನೂ ನಾವು ನೋಡಿದ್ದೇವೆ.
ಇದನ್ನೂ ಓದಿ:ಬೀದಿನಾಯಿ ಕಚ್ಚಿದ್ರೂ ಸುಮ್ನಿರ್ಬೇಕಂತೆ; ಇಲ್ಲಂದ್ರೆ ಮೇನಕಾ ಗಾಂಧಿ ಫೋನ್​ ಮಾಡಿ ಬೆದರಿಕೆ ಹಾಕ್ತಾರೆ!
ಆದರೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್​ಒ) ಹೇಳುವ ಪ್ರಕಾರ, ಕೋಳಿ ಮಾಂಸ ತಿಂದ ಮಾತ್ರಕ್ಕೆ ಹಕ್ಕಿ ಜ್ವರ ಬಂದುಬಿಡುತ್ತದೆ ಎನ್ನುವಂತಿಲ್ಲ. ಮಾಂಸವನ್ನು ಸರಿಯಾದ ರೀತಿಯಲ್ಲಿ ಬೇಯಿಸಿ ತಿನ್ನುವುದರಿಂದ ಸೋಂಕು ನಮಗೆ ಹರಡುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ. ಮಾಂಸವನ್ನು 75 ಡಿಗ್ರಿ ಸೆಲ್ಸಿಯಸ್​ನಲ್ಲಿ ಬೇಯಿಸಿದ ನಂತರ ಮಾತ್ರವೇ ಸೇವನೆ ಮಾಡಬೇಕು ಎಂದು ಸಂಸ್ಥೆ ಹೇಳಿಸಿದೆ. ಅದೇ ರೀತಿಯಲ್ಲಿ ಕೋಳಿ ಮೊಟ್ಟೆಯನ್ನೂ ಸರಿಯಾದ ರೀತಿಯಲ್ಲಿ ಬೇಯಿಸಿಯೇ ತಿನ್ನಬೇಕು. ಒಂದು ವೇಳೆ ಬೇಯಿಸಿದ್ದು ಸರಿಯಾಗಲಿಲ್ಲವೆಂದಾದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಡಬ್ಲ್ಯೂಡಚ್​ಒ ಎಚ್ಚರಿಕೆ ನೀಡಿದೆ. (ಏಜೆನ್ಸೀಸ್​)
ತಂಗಿಗಾಗಿ ಅಕ್ಕನನ್ನೇ ನಗ್ನಗೊಳಿಸಿದ! ಸಹಾಯಕ್ಕೆ ಕೇಳಿ ಬರಲಿ ಎಂದು ಕಾದಿದ್ದವನಿಗೆ ಕಾದಿತ್ತು ದೊಡ್ಡ ಶಾಕ್​!

ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 9 =
Remember me
