ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್​ಗೆ ಇಂದು ನೋಟಿಸ್ ಜಾರಿಯಾಗಿದೆ. ಎಐಸಿಸಿ ಶಿಸ್ತುಪಾಲನಾ ಸಮಿತಿ ಈ ನೋಟಿಸ್ ಜಾರಿ ಮಾಡಿದೆ.
ಕಳೆದ ಶನಿವಾರ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್​ ಬಹಿರಂಗ ವಾಗ್ದಾಳಿ ನಡೆಸಿದ್ದರು. ದೇವರಾಜ ಅರಸು ಕಾರಿನಲ್ಲಿ ಹೋದ ತಕ್ಷಣ ದೇವರಾಜು ಅರಸು ಆಗುವುದಿಲ್ಲ ಎಂಬಿತ್ಯಾದಿ ಹೇಳಿಕೆಗಳ ಮೂಲಕ ಅವರು ವಾಗ್ದಾಳಿ ನಡೆಸಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಶಿಸ್ತುಪಾಲನಾ ಸಮಿತಿಯಿಂದ ಬಿ.ಕೆ. ಹರಿಪ್ರಸಾದ್​ಗೆ ಇಂದು ನೋಟಿಸ್ ಜಾರಿ ಆಗಿದೆ. ಬಿಜೆಪಿ ಮತ್ತು ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ನಾಯಕರಿಂದ ವೇದಿಕೆಯಲ್ಲಿ ಭಾಗಿಯಾಗಿ, ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಕಾರಣ ನೀಡಿ ಹತ್ತು ದಿನಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.
ಎಲಾನ್ ಮಸ್ಕ್ ಬಚ್ಚಿಟ್ಟಿದ್ದ ‘ಆ ಮೂರನೇ ಮಗು’ವಿನ ವಿಷಯ ಕೊನೆಗೂ ಬಹಿರಂಗ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
