ನವದೆಹಲಿ: ರಾಷ್ಟ್ರದ ವಿವಿಧ ಕಡೆಗಳಲ್ಲಿ ಇರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರರಿಗೆ ತಮ್ಮ ಊರುಗಳಿಗೆ ತೆರಳಲು ಶ್ರಮಿಕ್​ ವಿಶೇಷ ರೈಲುಗಳ ಸಂಚಾರಕ್ಕೆ ರೈಲ್ವೇ ಮಂಡಳಿ ಮುಂದಾಗಿದೆ.
ಕೇಂದ್ರ ಸರ್ಕಾರ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರು ಲಾಕ್​ಡೌನ್​ ಹಿನ್ನೆಲೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಇವರನ್ನು ಸುರಕ್ಷಿತವಾಗಿ ಸ್ವಂತ ಊರುಗಳಿಗೆ ಮರಳಿಸಲು ಕೇಂದ್ರ ಸರ್ಕಾರ ನೀತಿ ರೂಪಿಸಿದೆ.
ಸಾರ್ವಜನಿಕ ಸಾರಿಗೆ ಸಂಸ್ಥೆ ಹಾಗೂ ವಿಶೇಷ ರೈಲುಗಳಲ್ಲಿ ಜನರನ್ನು ಸ್ವಂತ ಊರುಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಮಂಡಳಿ ಶ್ರಮಿಕ್​ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ.
ನೋಡಲ್​ ಅಧಿಕಾರಿಗಳ ನೇಮಕ: ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರನ್ನು ಸ್ವಂತ ಊರುಗಳಿಗೆ ತಲುಪಿಸಲು ಭಾರತೀಯ ರೈಲ್ವೇ ಮಂಡಳಿ ನೋಡಲ್​ ಅಧಿಕಾರಿಗಳನ್ನು ನೇಮಕ ಮಾಡಿದೆ.
ಈ ಅಧಿಕಾರಿಗಳು ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಿದ್ದಾರೆ.ನೋಡಲ್​ ಅಧಿಕಾರಿಗಳು ರೈಲು ನಿಲ್ದಾಣದಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಟಿಕೆಟ್​ ವಿತರಣೆ ಸೇರಿದಂತೆ ಇತರೆ ಸೇವೆಗಳನ್ನು ನೀಡಲಿದ್ದಾರೆ.
ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಕೈಗೆ ಸೀಲು ಹಾಕಲಿದ್ದಾರೆ. ಸ್ವಂತ ಊರುಗಳಿಗೆ ತೆರಳಿದವರು ವೈದ್ಯರು ಹೇಳಿದಷ್ಟು ದಿನ ಕ್ವಾರಂಟೈನ್​ನಲ್ಲಿ ಇರಬೇಕಾಗುತ್ತದೆ. ವಿಶೇಷ ರೈಲುಗಳಲ್ಲಿ ಆಗಮಿಸಿದವರ ಎಲ್ಲ ಮಾಹಿತಿಯನ್ನು ರೈಲ್ವೇ ಮಂಡಳಿ ಆಯಾ ರಾಜ್ಯ ಸರ್ಕಾರಗಳಿಗೆ ನೀಡಲಿದೆ. (ಏಜೆನ್ಸೀಸ್​)
ಮಹಾರಾಷ್ಟ್ರದಲ್ಲಿ ಉದ್ಭವಿಸಬಹುದಾಗಿದ್ದ ಸಂವಿಧಾನ ಬಿಕ್ಕಟ್ಟಿಗೆ ಬ್ರೇಕ್​, ಮೇ 21ಕ್ಕೆ ವಿಧಾನಪರಿಷತ್​ ಚುನಾವಣೆ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
