ಶ್ರೀಶೈಲಂ:ವರ್ಷದ 12 ಮಾಸಗಳಲ್ಲಿ ಶ್ರಾವಣ ಮಾಸವು ಹಿಂದುಗಳಿಗೆ ಅತ್ಯಂತ ಪವಿತ್ರ ಮಾಸವಾಗಿದ್ದು, ಈ ಮಾಸವು ಶಿವಪೂಜೆ, ಪುರಾಣ ಪುಣ್ಯಕತೆಗಳಿಗೆ ಮೀಸಲಾಗಿದೆ ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ಅಭಿಪ್ರಾಯಪಟ್ಟರು.
ಜನ್ಮದಿನದ ಹಿನ್ನೆಲೆಯಲ್ಲಿ ಶ್ರೀಶೈಲ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಡಾ.ವಿಜಯ ಸಂಕೇಶ್ವರ ಮತ್ತು ಶ್ರೀಮತಿ ಲಲಿತಾ ಸಂಕೇಶ್ವರ ಅವರು ಶ್ರೀಶೈಲ ಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀಶೈಲ ಜಗದ್ಗುರುಗಳ ಶ್ರಾವಣ ತಪೋನುಷ್ಠಾನ ಮತ್ತು ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಶ್ರಾವಣ ಮಾಸ ಶಿವನ ಪೂಜೆಗೆ ಶ್ರೇಷ್ಠ ಮಾಸವಾಗಿದೆ. ಇದೇ ಮಾಸದಲ್ಲಿ ಡಾ.ವಿಜಯ ಸಂಕೇಶ್ವರ ಜನ್ಮದಿನ ಬರುವುದರಿಂದ ಪ್ರತಿವರ್ಷ ಶ್ರೀಶೈಲಕ್ಕೆ ಆಗಮಿಸುತ್ತಿರುವುದು ಸಂತೋಷದ ವಿಷಯ ಎಂದರು. ಜನ್ಮದಿನದ ಹಿನ್ನೆಲೆಯಲ್ಲಿ ಡಾ.ವಿಜಯ ಸಂಕೇಶ್ವರ ಮತ್ತು ಶ್ರೀಮತಿ ಲಲಿತಾ ಸಂಕೇಶ್ವರ ಅವರನ್ನು ಶ್ರೀಶೈಲ ಜಗದ್ಗುರುಗಳು ಸನ್ಮಾನಿಸಿ ಆಶೀರ್ವದಿಸಿದರು. ಸಮಾರಂಭದಲ್ಲಿ ಕಡಗಂಚಿ, ಜೈನಾಪುರ ಮತ್ತಿತರ ಮಠಗಳ ಶ್ರೀಗಳು ಉಪಸ್ಥಿತರಿದ್ದರು.
ವಿಮಾನಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲೇ ಬಚಾವಾದ ಕಾರು!

ತಿಗಣೆ ಮದ್ದಿಗೆ ಬಲಿಯಾದ್ಲು 6 ವರ್ಷದ ಬಾಲಕಿ; ನಿಜಕ್ಕೂ ಆಗಿದ್ದೇನು? ತಪ್ಪಿತಸ್ಥರು ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
