ಕೋಲಂಬೊ:ವಾಹನ ಚಾಲನೆ ಮಾಡುವ ಸಮಯದಲ್ಲಿ ಪಾದಚಾರಿಯೊಬ್ಬರ ಮೇಲೆ ವಾಹನ ಹಾಯಿಸಿ, ಅವರ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತ ಶ್ರೀಲಂಕಾ ಬ್ಯಾಟ್ಸ್‌ಮನ್ ಕುಸಲ್ ಮೆಂಡಿಸ್ ಅವರನ್ನು ಭಾನುವಾರ ಬಂಧಿಸಲಾಗಿದೆ.
ಕೊಲಂಬೊ ಉಪನಗರ ಪನದುರಾದಲ್ಲಿ ಮೆಂಡಿಸ್ ಬಳಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ 74 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪ್ರವಾಹಕ್ಕೆ ನಲುಗಿದ ಅಸ್ಸಾಂ: 37 ಬಲಿ- 11 ಲಕ್ಷ ಜನ ಅತಂತ್ರ
ಅಪಘಾತ ಮಾಡಿರುವ ಆರೋಪ ಹೊತ್ತ ಕುಸನ್‌ ಅವರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿದ್ದು, ಇಂದು ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
25 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ 44 ಟೆಸ್ಟ್ ಮತ್ತು 76 ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸಿದ್ದಾರೆ.
ಕಳೆದ ವರ್ಷ ಕೂಡ ಇವರು ಕ್ರಿಕೆಟ್‌ ಮೈದಾನದಲ್ಲಿಯೇ ಬೈಕ್‌ ಓಡಿಸಿ ಆಯ ತಪ್ಪಿ ಕೆಳಗೆ ಬಿದ್ದು ಎಡವಟ್ಟು ಮಾಡಿಕೊಂಡಿದ್ದರು. ಸತತ ನಾಲ್ಕು ವರ್ಷಗಳ ಬಳಿಕ ತವರಿನಲ್ಲಿ ಮೊದಲ ಸರಣಿ ಗೆದ್ದ ಲಂಕಾ ಆಟಗಾರರು ಸಂಭ್ರಮದಲ್ಲಿ ತೇಲಾಡುತ್ತಿದ್ದರು. ಈ ಸಮಯದಲ್ಲಿ ಕುಸಲ್ ಮೆಂಡಿಸ್ ಬೈಕ್‌ ಓಡಿಸಿ ಇಂಥದ್ದೊಂದು ಕೆಲಸ ಮಾಡಿದ್ದರು.
ಸೇವಾ ಅವಧಿ ಮುಗಿದಿದ್ದರೂ ದೇಶಸೇವೆಗೆ ಓಗೊಟ್ಟು ಹುತಾತ್ಮನಾದ ಹಾಸನದ ಯೋಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
