ಭುವನೇಶ್ವರ:ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಬಂಧಬೆಳೆಸಿ ನಂತರ ಮದುವೆಗೆ ನಿರಾಕರಿಸಿದ ಸಬ್​ಇನ್​ಸ್ಪೆಕ್ಟರ್ ವಿರುದ್ಧ ಮಹಿಳಾ ಸಬ್ಇನ್​​ಸ್ಪೆಕ್ಟರ್ ದೂರು ದಾಖಲಿಸಿದ್ದಾರೆ.ಒಡಿಶಾದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಲು ಧಾಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಸಬ್ ಇನ್ಸ್‌ಪೆಕ್ಟರ್ ಆರೋಪಿಸಿದ್ದಾರೆ.ಮಹಿಳೆ ಸೋಮವಾರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕಚೇರಿಗೆ ಬಂದು ಧಾಲ್ ವಿರುದ್ಧ ದೂರು ದಾಖಲಿಸಿದ್ದಾರೆ.ಮದುವೆಯ ಆಗುವುದಾಗಿ ಭರವಸೆ ನೀಡಿ ಆರೋಪಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆದರೆ ನಂತರ ಅವಳನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ:ಅಂತ್ಯಕ್ರಿಯೆ ವೆಚ್ಚ 85,000 ರೂ.ಅಂತೆ…! ಖಾಸಗಿ ಅಂಬ್ಯುಲೆನ್ಸ್​​ನ ಸುಲಿಗೆ ಹಾದಿ
2017 ರಲ್ಲಿ ಬಿಜು ಪಟ್ನಾಯಕ್ ರಾಜ್ಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ದಿನಗಳಲ್ಲಿ ಎಸ್‌ಐ ಸಿಲು ಧಾಲ್ ಪ್ರೇಮ ನಿವೇದನೆ ಮಾಡಿದ್ದ. ಆದರೆ, ತಮ್ಮಿಬ್ಬರದು ಭಿನ್ನ ಜಾತಿಯಾದ ಕಾರಣ ಆಕೆ ಆ ಪ್ರಸ್ತಾಪವನ್ನು ಸ್ವೀಕರಿಸಲಿಲ್ಲ ಎಂದು ತಿಳಿಸಿದ್ದಾಳೆ.ವಾಟ್ಸ್‌ಆ್ಯಪ್‌ನಲ್ಲಿ ಅವನು ಸಂದೇಶಗಳನ್ನು ಕಳುಹಿಸುತ್ತಿದ್ದ. ನಂತರ, ಆಕೆ ಸಂಬಲ್ಪುರಕ್ಕೆ ನಿಯೋಜನೆಗೊಂಡಾಗ ಎಸ್‌ಐ ಆಕೆಯ ಮನೆಗೆ ಬಂದು ಅವಳೊಂದಿಗೆ ದೈಹಿಕ ಸಂಬಂಧವನ್ನು ಬೆಳೆಸಿದ.ಧಾಲ್ ನ ನಡವಳಿಕೆಯನ್ನು ಪ್ರತಿಭಟಿಸುತ್ತಲೇ ರಾತ್ರಿಯಿಡೀ ಅಳುತ್ತಿದ್ದೆ ಎಂದು ಮಹಿಳೆ ಹೇಳಿದ್ದಾರೆ. ಮದುವೆಯಿಲ್ಲದೆ ಸೆಕ್ಸ್ ಮಾಡುವುದು ಅಪರಾಧ ಎಂದು ಅವಳು ಹೇಳಿದಾಗ, ಧಾಲ್ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ.ಆತ ಮದುವೆಯಾಗಲು ನಿರಾಕರಿಸಿದ ನಂತರ, ಆಕೆ ಬೇರೆ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದು, ಆರೋಪಿ ಎಸ್‌ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಕೋರಿದ್ದಾರೆ.. ಆರೋಪಿ ಸಬ್ ಇನ್ಸ್‌ಪೆಕ್ಟರ್ ಸದ್ಯ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
https://www.vijayavani.net/complaint-against-fake-baba/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
