ನವದೆಹಲಿ:ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್​ ಬಳಿಗೆ ತಲುಪಿದ್ದರೂ ಇನ್ನೂ ಒಂದು ಅಂತಿಮ ನಿರ್ಣಯಕ್ಕೆ ಬರಲಾಗಿಲ್ಲ. ಇದೇ ವಿಚಾರವಾಗಿ ಪ್ರಬಲ ಆಕಾಂಕ್ಷಿಗಳಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ದೆಹಲಿಯಲ್ಲಿದ್ದಾರೆ.
ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ದೆಹಲಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ಭೇಟಿ ಮಾಡಿದ್ದು, ಇದು ಸಿಎಂ ವಿಚಾರವಾಗಿ ಇಬ್ಬರ ನಡುವಿನ ಸ್ಪರ್ಧೆ ಬಿಗಿಯಾಗಿದೆ ಎಂಬ ಸುಳಿವನ್ನು ನೀಡಿದೆ.
ಇದನ್ನೂ ಓದಿ:ಈಶ್ವರ ಖಂಡ್ರೆಯನ್ನು ಡಿಸಿಎಂ ಮಾಡುವಂತೆ ಮಠಾಧೀಶರ ಒತ್ತಾಯ
ಮೊದಲಿಗೆ ಡಿ.ಕೆ.ಶಿವಕುಮಾರ್ ಐದು ಗಂಟೆ ಸುಮಾರಿಗೆ ಖರ್ಗೆಯವರ ಅಧಿಕೃತ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದು, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು. ಅದಕ್ಕಾಗಿ ತಮ್ಮ ಅಹವಾಲು ಮಂಡಿಸಿದರು. ಬಳಿಕ ಹೊರಗೆ ಬಂದ ಡಿಕೆಶಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದರು.
ಇದನ್ನೂ ಓದಿ:ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು
ನಂತರ ಆರು ಗಂಟೆ ಸುಮಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಅವರು ಕೂಡ ಸಿಎಂ ಸ್ಥಾನಾಕಾಂಕ್ಷಿಯಾಗಿ ತಮ್ಮ ಬೇಡಿಕೆಯನ್ನು ಖರ್ಗೆ ಮುಂದಿಟ್ಟರು. ಅಂತಿಮವಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಖರ್ಗೆ ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಬಹುಶಃ ನಾಳೆ ಬೆಂಗಳೂರಿನಲ್ಲಿ ನಿರ್ಣಯ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಚುನಾವಣಾ ಫಲಿತಾಂಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್ ಅಭ್ಯರ್ಥಿ ನಿರ್ಧಾರ

ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಪರಾಜಿತ ಅಭ್ಯರ್ಥಿ ರಮಾನಾಥ ರೈ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
