ಬೆಳಗಾವಿ:ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಏಳನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ಸರ್ಕಾರಕ್ಕೆ ಜಾರಿ ಮಾಡಲು ಇಚ್ಛಾ ಶಕ್ತಿ ಇಲ್ಲ. ಸುಳ್ಳು ಹೇಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏಳನೇ ವೇತನ ಜಾರಿಗೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಬಜೆಟ್​ನಲ್ಲಿ ಏಳನೇ ವೇತನ ಆಯೋಗ ಜಾರಿಗೊಳಿಸಲು ಅಗತ್ಯ ಇರುವಷ್ಟು ದುಡ್ಡು ಮೀಸಲಿಟ್ಟಿಲ್ಲ. ಕೂಡಲೇ ಮದ್ಯಂತರ ವರದಿ ಪಡೆದು ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಹೇಳಿದರು.
ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಏಳನೇ ವೇತನ ಆಯೋಗ ಜಾರಿ ಮಾಡಬೇಕು. ಇಲ್ಲದೇ ಹೋದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿ ಮಾಡುತ್ತೇವೆ. ಐದು ವರ್ಷಗಳ ಹಿಂದೆ ನೌಕರರಿಗೆ ಆರನೇ ವೇತನ ಆಯೋಗ ನಾನು ಮಾಡಿದ್ದೆ. ಆಗಲೂ ವಿಧಾನಸಭೆ ಚುನಾವಣೆ ಸಮೀಪದಲ್ಲೇ ನಾವು ಇದ್ದೆವು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:PHOTOS |ಮಾಲ್ಡೀವ್ಸ್ ಪ್ರವಾಸದಲ್ಲಿ ಕಾಂತಾರ ಬೆಡಗಿ; ಕಡಲ ಕಿನಾರೆಯಲ್ಲಿ ಸಪ್ತಮಿ ಗೌಡ ಎಂಜಾಯ್…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + thirteen =
Remember me
