ವಯನಾಡ್​:ಹಾಥರಸ್ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಮನೆಗೆ ಹೋಗಲೆತ್ನಿಸಿದ್ದ ಪತ್ರಕರ್ತ ಸಿದ್ದಿಕ್​ ಕಪ್ಪನ್​ ಮತ್ತು ಮೂವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ಅವಧಿ ಎರಡನೇ ಬಾರಿ ನವೆಂಬರ್ 2 ರ ತನಕ ವಿಸ್ತರಣೆಯಾಗಿದೆ. ಈ ನಡುವೆ, ಕಪ್ಪನ್​ ಬಿಡುಗಡೆಗೆ ಆಗ್ರಹಿಸಿದ್ದ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಕಪ್ಪನ್ ಪತ್ನಿ ರೈಹನತ್​ ನ್ಯಾಯ ದೊರಕಿಸಿಕೊಡುವಂತೆ ಮನವಿ ಸಲ್ಲಿಸಿದರು.
ಕಲ್ಪೆಟ್ಟಾ ಗೆಸ್ಟ್​ ಹೌಸ್​ನಲ್ಲಿದ್ದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ರೈಹನತ್​, ನಮಗೆ ನ್ಯಾಯ ದೊರಕುವ ವಿಶ್ವಾಸವಿದೆ. ಕಪ್ಪನ್ ವಿರುದ್ಧ ಇನ್ನಷ್ಟು ಆರೋಪಗಳನ್ನು ಹೊರಿಸಿದರೆ ಎಂಬ ಆತಂಕ ನಮಗಿದೆ. ಬಂಧನದ ಬಳಿಕ ಅವರನ್ನು ಸಂಪರ್ಕಿಸುವುದು ಸಾಧ್ಯವಾಗಿಲ್ಲ. ವಕೀಲರಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಬಲವಂತದ ಮತಾಂತರದಿಂದ ಹಿಂದುಗಳನ್ನು ರಕ್ಷಿಸುವಲ್ಲಿ ಪಾಕ್​ ವಿಫಲ: ಅಲ್ಲಿಯದ್ದೇ ಸಂಸದೀಯ ಸಮಿತಿಯ ವರದಿ!
ಸ್ವಕ್ಷೇತ್ರವಾಗಿರುವ ವಯನಾಡಿನಲ್ಲಿ ಸಂಸದ ರಾಹುಲ್ ಗಾಂಧಿ ಮೂರು ದಿನಗಳಿಂದ ತಂಗಿದ್ದು, ಕ್ಷೇತ್ರ ಕಾರ್ಯಗಳತ್ತ ಗಮನಹರಿಸಿದ್ದಾರೆ. (ಏಜೆನ್ಸೀಸ್)
ಫೈನಲ್ ಬ್ಯಾಚಿನ ವಿದ್ಯಾರ್ಥಿಗಳಿಗೆ ಕರೊನಾ ಸಂಕಷ್ಟ ತಂದೊಡ್ಡಿದ ಸಂಕಟವಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seven =
Remember me
