ಚಂಡಿಗಢ:ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೊಳಗಾಗಿ ನಿನ್ನೆಯಷ್ಟೇ ಶರಣಾಗಿರುವ ಕಾಂಗ್ರೆಸ್​​ ನಾಯಕ ನವಜೋತ್​ ಸಿಂಗ್​ ಸಿಧು ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ.
ರಸ್ತೆ ಗಲಾಟೆ ಪ್ರಕರಣವೊಂದರಲ್ಲಿ ಸಿಧುಗೆ ಸುಪ್ರೀಂಕೋರ್ಟ್​​ ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಗಡುವು ನೀಡಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದರು.
ಇದೀಗ ಪಟಿಯಾಲ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಸಿಧು ಅವರಿಗೆ ಸದ್ಯಕ್ಕೆ ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ, ಸಾಮಾನ್ಯ ಖೈದಿಯಂತೆ ಇದ್ದಾರೆ ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ.
ಐಷಾರಾಮಿ ಬದುಕು ಕಂಡಿರುವ ಸಿಧುಗೆ ಇದು ತೀರಾ ಹೊಸತು. ಜೈಲಿನಲ್ಲಿ ಕಾಲ ಕಳೆಯುವುದು ಅವರಿಗೆ ತುಂಬಾ ಕಷ್ಟವಾಗುತ್ತಿದೆ. ಮೊದಲ ದಿನ ರಾತ್ರಿ ಊಟ ಮಾಡದೇ ಮಾತ್ರೆ ನುಂಗಿ ಮಲಗಿದ್ದಾರಂತೆ. ಇವರಿಗಾಗಿ ವಿಶೇಷ ಆಹಾರದ ವ್ಯವಸ್ಥೆಯೇನೂ ಮಾಡಿಲ್ಲವಂತೆ. ಇನ್ನು ಅವರ ಖೈದಿ ಸಂಖ್ಯೆ 241383 ಹೀಗಿದೆ.
ಸದ್ಯ ಕೆಲ ಕಾಯಿಲೆಗಳು ಇರುವುದರಿಂದ ಅವರು ಮಾತ್ರೆಗಳನ್ನು ಸೇವಿಸಲೇಬೇಕಿದೆ. ಇತರೆ ಆಹಾರ ಅಗತ್ಯವಿದ್ದರೆ, ಜೈಲಿನಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಅವರೇ ತಯಾರಿಸಿಕೊಳ್ಳಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ತನ್ನ ಮಗಳಿಗೆ ಸರ್ಕಾರಿ ಕೆಲಸ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಸಚಿವ, ಕೆಲಸ ವಾಪಸ್​​ ಪಡೆದ ಕೋರ್ಟ್​​: ಕಾರಣವೇನು ಗೊತ್ತಾ?

ಟ್ರಾಕ್ಟರ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
