ಸಿಕ್ಕಿಂ:ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ 21ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 23 ಸೇನಾ ಸಿಬ್ಬಂದಿ ಸೇರಿದಂತೆ 70 ಜನರು ಕಾಣೆಯಾಗಿದ್ದಾರೆ. ಈ ಮಧ್ಯೆ ಚುಂಗ್ತಾಂಗ್ ಅಣೆಕಟ್ಟು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಈ ಬಗ್ಗೆ ಸಿಎಂ ಪ್ರೇಮ್ ಸಿಂಗ್ ತಮಾಂಗ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಉದ್ಗಮ್​ ಪೋರ್ಟಲ್​ಗೆ 30ಬ್ಯಾಂಕ್​: ಶೇ. 6.5 ರೆಪೋದರ ಮುಂದುವರೆಸಿದ ಆರ್​ಬಿಐ
ಸಿಕ್ಕಿಂನ ಚುಂಗ್ತಾಂಗ್ ಅಣೆಕಟ್ಟು ಕಳಪೆ ನಿರ್ಮಾಣದಿಂದಾಗಿ ಕೊಚ್ಚಿಹೋಗಿದೆ ಎಂದು ಹೇಳಿದ ಸಿಎಂ, “ಅದರ ನಿರ್ಮಾಣವನ್ನು ಸರಿಯಾದ ರೀತಿಯಲ್ಲಿ ಮಾಡದ ಕಾರಣ ಕೊಚ್ಚಿಹೋಗಿದೆ. ರಾಜ್ಯದ ಉತ್ತರ ಭಾಗದ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ” ಎಂದು ಸಿಎಂ ಹೇಳಿದ್ದಾರೆ.
ಪ್ರವಾಹದಿಂದಾಗಿ ರಾಜ್ಯದಲ್ಲಿ 13 ಸೇತುವೆಗಳು ನಾಶವಾಗಿದ್ದು, ಮಂಗನ್ ಜಿಲ್ಲೆಯೊಂದರಲ್ಲೇ ಎಂಟು ಸೇತುವೆಗಳು ಕೊಚ್ಚಿ ಹೋಗಿವೆ. ಗ್ಯಾಂಗ್‌ಟಾಕ್‌ನಲ್ಲಿ ಮೂರು ಮತ್ತು ನಾಮ್ಚಿಯಲ್ಲಿ ಒಟ್ಟು ಎರಡು ಸೇತುವೆಗಳು ನಾಶವಾಗಿವೆ. ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿದೆ ಎಂದು ಇಂದಿನ ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:ಸರ್ಕಾರಿ ಇಲಾಖೆಗಳಲ್ಲಿನ ಗುತ್ತಿಗೆ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗೆ ಮೀಸಲಾತಿ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ
“ಬುರ್ದಾಂಗ್ ಪ್ರದೇಶದಿಂದ ಕಾಣೆಯಾಗಿದ್ದ 23 ಸೇನಾ ಸಿಬ್ಬಂದಿಗಳಲ್ಲಿ, ಏಳು ಮಂದಿಯ ಮೃತದೇಹಗಳನ್ನು ರಾಜ್ಯದ ಇತರ ಪ್ರದೇಶಗಳಿಂದ ವಶಪಡಿಸಿಕೊಳ್ಳಲಾಗಿದ್ದು, ಒಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಕಾಣೆಯಾದ 15 ಜವಾನರಿಗಾಗಿ ಶೋಧ ನಡೆಯುತ್ತಿದೆ” ಎಂದು ಮುಖ್ಯಮಂತ್ರಿ ಹೇಳಿದರು,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
