ಚೆನ್ನೈ:ದಕ್ಷಿಣ ಭಾರತದ ಚಿತ್ರರಂಗದಲ್ಲಿ 80ರ ದಶಕದಲ್ಲಿ ಮಿಂಚು ಹರಿಸಿದ್ದ ನಟಿ ಸಿಲ್ಕ್​ ಸ್ಮಿತಾ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ದುರಂತ ಸಾವಿಗೀಡಾದರು. ಸ್ಮಿತಾ ಅವರ ದೇಹದಲ್ಲಿ ಹೆಚ್ಚುವರಿ ಆಲ್ಕೋಹಾಲ್​ ಕಂಡುಬಂದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಿರ್ಣಯಿಸಲಾಯಿತು.
80 ದಶಕದಲ್ಲಿ ಸಿಲ್ಕ್​ ಸ್ಮಿತಾ ಬಹುಬೇಡಿಕೆಯ ನಟಿಯಾಗಿದ್ದರು. ಹೆಚ್ಚಾಗಿ ಅವರು ಕಾಮಪ್ರಚೋದಕ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಐಟಂ ಸಾಂಗ್​ಗಳಿಗೆ ಹೆಚ್ಚಾಗಿ ಸೊಂಟ ಬಳುಕಿಸುತ್ತಿದ್ದರು. ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಹೊಳೆಯುವ ಕಣ್ಣುಗಳು, ಸುವಾಸನೆಯ ಕೂದಲು ಮತ್ತು ದ್ರಾವಿಡ ಮೈಬಣ್ಣವು ಸಿಲ್ಕ್ ಸ್ಮಿತಾಳನ್ನು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ದಿತು. ಸಿನಿಮಾ ರಂಗದಲ್ಲಿ ಉತ್ತುಂಗದಲ್ಲಿ ಇರುವಾಗಲೇ ಅವರ ಆತ್ಮಹತ್ಯೆ ಸುದ್ದಿ ಅಭಿಮಾನಿಗಳಲ್ಲಿ ದೊಡ್ಡ ಆಘಾತವನ್ನುಂಟು ಮಾಡಿತು.
ಇದನ್ನೂ ಓದಿ:ಸಂಕಷ್ಟ ಸೂತ್ರ ಇಲ್ಲವೆಂದ ಮೇಲೆ ತಮಿಳುನಾಡಿಗೆ ಯಾವ ಆಧಾರದ ಮೇಲೆ ನೀರು ಬಿಟ್ಟರು: ಮಾಜಿ ಸಿಎಂ ಎಚ್​ಡಿಕೆ
ಇದೀಗ ಸಿಲ್ಕ್​ ಸ್ಮಿತಾ ಅವರ ಕುರಿತಾದ ಇಂಟೆರೆಸ್ಟಿಂಗ್​ ಮಾಹಿತಿಯೊಂದು ಹೊರಬಿದ್ದಿದೆ. ಅದೇನೆಂದರೆ, ಸಿನಿಮಾವೊಂದರ ಚಿತ್ರೀಕರಣದ ವೇಳೆ ಸಿಲ್ಕ್ ಸ್ಮಿತಾ ಸೇಬು ಹಣ್ಣನ್ನು ಕಚ್ಚಿ ತನ್ನ ಬಳಿ ಇಟ್ಟುಕೊಂಡಿದ್ದರಂತೆ. ಶೂಟಿಂಗ್ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರುಇದನ್ನು ಗಮನಿಸಿ ಸೇಬು ಹಣ್ಣು ಕದ್ದು ಓಡಿಹೋದರಂತೆ. ಅದರ ನಂತರ, ಅವರು ಸೇಬು ಹಣ್ಣನ್ನು ಸಿಲ್ಕ್​ ಸ್ಮಿತಾ ಅವರು ಕಚ್ಚಿದ ಹಣ್ಣು ಎಂದು ಹರಾಜು ಹಾಕಿದರಂತೆ.
2 ರೂಪಾಯಿಗಿಂತಲೂ ಕಡಿಮೆ ಬೆಲೆಯಿದ್ದ ಸೇಬು ಹಣ್ಣನ್ನು ಆ ಕಾಲದಲ್ಲೇ ಹರಾಜಿನಲ್ಲಿ 350 ರೂಪಾಯಿಗೆ ಖರೀದಿ ಮಾಡಿದರಂತೆ. ಅಭಿಮಾನಿಯೊಬ್ಬ ಖರೀದಿ ಮಾಡಿದರು ಎಂದು ಹಿರಿಯ ಪತ್ರಕರ್ತ ಸೆಯ್ಯರ್ ಬಾಲು ಎಂಬುವರು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಆಗಿನ ಕಾಲದಲ್ಲಿ 350 ರೂಪಾಯಿ ಅಂದರೆ ಇಂದು 4 ಸಾವಿರ ರೂಪಾಯಿಗೂ ಅಧಿಕವಾಗಿದೆ.(ಏಜೆನ್ಸೀಸ್​)
ಅನಸೂಯ ಈಗ ಸಿಲ್ಕ್; ಸ್ಮಿತಾ ಕುರಿತು ಇನ್ನೊಂದು ಬಯೋಪಿಕ್?

ಶ್ರೀರೆಡ್ಡಿ ಈಗ ಸಿಲ್ಕ್ ಸ್ಮಿತಾ; ಬಯೋಪಿಕ್​ನಲ್ಲಿ ಮತ್ತಷ್ಟು ನಟ-ನಟಿಯರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × four =
Remember me
