ಚೆನ್ನೈ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ಧಾರೆ. ಇತ್ತ ಖ್ಯಾತ ಗಾಯಕಿ ಕೆ.ಎಸ್​. ಚಿತ್ರಾ ಅವರು ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಜನರು ರಾಮನಾಮ ಜಪಿಸಿ ದೀಪಗಳನ್ನು ಬೆಳಗಿಸುವಂತೆ ಮನವಿ ಮಾಡಿದ್ದಾರೆ.
ಗಾಯಕಿ ಚಿತ್ರಾ ಅವರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಬೆಂಬಲಿಸುವಂತೆ ಕರೆ ನೀಡಿರುವ ವಿಡಿಯೊಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಚಿತ್ರಾ ಅವರ ಹೇಳಿಕೆಯನ್ನು ಟೀಕಿಸಿದ್ದು, ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ.
ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದಾಗ, ಪ್ರತಿಯೊಬ್ಬರೂ ‘ಶ್ರೀರಾಮ, ಜಯ ರಾಮ, ಜಯ ಜಯ ರಾಮ’ ಎಂಬ ಮಂತ್ರವನ್ನು ಪಠಿಸಬೇಕು. ಹಾಗೆಯೇ ಸಂಜೆಯ ವೇಳೆ ಮನೆಯ ಎಲ್ಲಾ ಭಾಗಗಳಲ್ಲಿ ಐದು ಬತ್ತಿಯ ದೀಪಗಳನ್ನು ಹಚ್ಚಬೇಕು. ದೇವರ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಲೋಕಾ ಸಮಸ್ತಾ ಸುಖಿನೋ ಭವಂತು ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
Singer Chitra in support of#PranPratishtha#RamMandir#AyodhyaSriRamTemple🚩🚩🚩pic.twitter.com/qqDBeHjXvW
ಇದನ್ನೂ ಓದಿ:ಕ್ರಿಕೆಟ್​ಗೆ ವಿದಾಯ ಘೋಷಿಸಿದ ಚೊಚ್ಚಲ ಐಪಿಎಲ್​ ಸೂಪರ್​ಸ್ಟಾರ್​
ಇತ್ತ ಚಿತ್ರಾ ಅವರ ಪೋಸ್ಟ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಅವರನ್ನು ಬೆಂಬಲಿಸಿ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಸುರೇಂದ್ರನ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಯೋಧ್ಯೆ ಪ್ರಾಣ ಪ್ರತಿಷ್ಠಾ ದಿನದಂದು ದೀಪ ಬೆಳಗಿಸುವಂತೆ ಮನವಿ ಮಾಡಿದ ಗಾಯಕಿ ಚಿತ್ರಾ ಅವರ ಮೇಲಿ ಎಡ-ಜಿಹಾದಿ ಗುಂಪುಗಳು ಸೈಬರ್ ದಾಳಿ ನಡೆಸಿವೆ.
ಕೇರಳದಲ್ಲಿ ಪಿಣರಾಯಿ ವಿಜಯನ್ ಆಳ್ವಿಕೆಯಲ್ಲಿ ಒಬ್ಬ ಹಿಂದೂ ತನ್ನ ನಂಬಿಕೆಗಳನ್ನು ಸಹ ಅನುಯಾಯಿಗಳೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕೃತ್ಯದ ಬಗ್ಗೆ ಕಾಂಗ್ರೆಸ್ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿ. ನಾವು ಕೇರಳ ಬಿಜೆಪಿ ಕೆಎಸ್ ಚಿತ್ರಾ ಅವರ ಅಚಲ ಬೆಂಬಲಕ್ಕೆ ನಿಂತಿದ್ದೇವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗಾಯಕ ವೇಣುಗೋಪಾಲ್​, ನನ್ನ ಮತ್ತು ಚಿತ್ರ ಅವರದ್ದು 50 ವರ್ಷಗಳ ಹಳೆಯ ಸ್ನೇಹ. ಆಕೆ ಅದ್ಬುತ ಗಾಯಕಿ, ಆಕೆಯನ್ನು ಟೀಕಿಸಿ ಹಲವರುಇ ಆನ್​ಲೈನ್​ನಲ್ಲಿ ಕಮೆಂಟ್​ ಮಾಡಿರುವುದು ನನಗೆ ನೋವುಂಟು ಮಾಡಿದೆ. ನೀವು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದರೆ ದಯವಿಟ್ಟು ಅದನ್ನು ಪ್ರಯತ್ನಿಸಿ ಮತ್ತು ನೋಯಿಸಬೇಡಿ ಎಂದು ಮನವಿ ಮಾಡಿದ್ಧಾರೆ.
Appalled by cyber attacks on the esteemed singer@KSChithraji who appealed to light a lamp on Ayodhya Prana Prathista day, by left-jihadist groups. Under the rule of@pinarayivijayanin Kerala, things are such that a Hindu can't freely share her beliefs with fellow followers. It…pic.twitter.com/78yFIkMmNA
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × three =
Remember me
