ಚೆನ್ನೈ:ಗಾನ ಗಾರುಡಿಗ ಎಸ್​.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ನೆರವೇರಿತು.
ಸಂಗೀತ ಸ್ವರ ಲೋಕದ ಮಾಂತ್ರಿಕ ಎಂದೇ ಪ್ರಸಿದ್ಧರಾಗಿದ್ದ ಎಸ್​ಪಿಬಿ ಅವರು ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಎಸ್​ಪಿಬಿ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ರಾತ್ರಿ ತಿರುವಳ್ಳೂರು ಜಿಲ್ಲೆಯ ತಾಮರೈಪಾಕಂನಲ್ಲಿರುವ ಅವರ ತೋಟದ ಮನೆಗೆ ಸ್ಥಳಾಂತರಿಸಲಾಗಿತ್ತು. ಮನೆಯ ಬಳಿ ಜಮಾಯಿಸಿದ ಸಾವಿರಾರು ಅಭಿಮಾನಿಗಳು ಎಸ್​ಪಿಬಿ ಅವರ ಅಂತಿಮ ದರ್ಶನ ಪಡೆದರು. ಬಾಲು ಫಾರ್ಮ್​ಹೌಸ್​ನಲ್ಲೇ ಎಸ್​ಪಿಬಿ ಅಂತ್ಯಕ್ರಿಯೆ ಮಾಡಲಾಯಿತು. ಅವರ ಪುತ್ರ ಚರಣ್​ ಅವರು ಅಂತ್ಯಕ್ರಿಯೆ ವಿಧಿವಿಧಾನಗಳನ್ನು ನೆರವೇರಿಸಿದರು. ಎಸ್​ಪಿಬಿ ಅಂತ್ಯಕ್ರಿಯೆಯಲ್ಲಿ ಅನೇಕ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಬಾರದ ಲೋಕಕ್ಕೆ ತೆರಳಿದ ಸಂಗೀತ ಲೋಕದ ‘ಧ್ರುವತಾರೆ’ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಇನ್ನು ನೆನಪು ಮಾತ್ರ.
VIDEO| ಇದು ಕನ್ನಡದಲ್ಲಿ ಎಸ್‌ಪಿಬಿ ಹಾಡಿದ ಕೊ‌ನೆಯ ಹಾಡು!

PHOTO GALLERY| ಸ್ವರ ಮಾಂತ್ರಿಕ ಎಸ್​.ಪಿ. ಬಾಲಸುಬ್ರಹ್ಮಣ್ಯಂರ ಅಪರೂಪದ ಕ್ಷಣಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + thirteen =
Remember me
