ನವದೆಹಲಿ:ಅಯೋಧ್ಯೆಯಲ್ಲಿ ಪರಿಸ್ಥಿತಿ ವಿಷಮವಾಗಿದೆ. ಆದರೂ ಅಲ್ಲಿಗೆ ತೆರಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಏನೂ ಆಗದೆ ಇರಲಿ ಎಂದು ಹಾರೈಸುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್​ ರಾವತ್​ ಹೇಳಿದ್ದಾರೆ.
ಆಗಸ್ಟ್​ 5ರಂದು ನಡೆಯಲಿರುವ ರಾಮಮಂದಿರ ಭೂಮಿಪೂಜೆಯಲ್ಲಿ ಶಿವಸೇನೆ ನಾಯಕರು ಪಾಲ್ಗೊಳ್ಳುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಜಯ್​ ರಾವತ್​, ಅಯೋಧ್ಯೆಯಲ್ಲಿ ಕರೊನಾ ಸೋಂಕಿತರ ಪ್ರಮಾಣ ಹೆಚ್ಚಾಗಿದೆ. ಈ ಮಧ್ಯೆ ವಿಐಪಿಗಳು ಆದಷ್ಟು ಕಡಿಮೆ ಜನರು ಪಾಲ್ಗೊಳ್ಳುವುದು ಒಳ್ಳೆಯದು ಎಂದು ಹೇಳಿದ್ದಾರೆ.ಇದನ್ನೂ ಓದಿ:ಶ್ರೀ ರಾಮ ಮಂದಿರಕ್ಕಾಗಿ 28 ವರ್ಷದಿಂದ ನಿರಶನ; ದೇಗುಲದ ಪ್ರಸಾದ ಸ್ವೀಕರಿಸಿ ಉಪವಾಸ ಮುರಿದ ಶಬರಿ
ಅಯೋಧ್ಯೆಯಲ್ಲಿ ಪರಿಸ್ಥಿತಿ ಸರಿಯಿಲ್ಲ. ಹೀಗಿರುವಾಗ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಗಣ್ಯರನ್ನು ಆಮಂತ್ರಿಸುವ ಬಗ್ಗೆ ಪ್ರತಿಯೊಬ್ಬರೂ ಯೋಚನೆ ಮಾಡುತ್ತಿದ್ದಾರೆ. ಕೆಲವರು ಈಗಾಗಲೇ ಅಲ್ಲಿಗೆ ಹೋಗಲು ನಿರಾಕರಿಸಿದ್ದಾರೆ. ಇಷ್ಟಾದರೂ ಪ್ರಧಾನಿ ಮೋದಿಯವರು ಭೂಮಿಪೂಜೆಗಾಗಿ ಅಯೋಧ್ಯೆಗೆ ತೆರಳುತ್ತಿದ್ದಾರೆ. ಅವರಿಗೆ ಏನೂ ತೊಂದರೆಯಾಗದಿರಲಿ ಎಂದು ಹಾರೈಸುತ್ತೇನೆ ಎಂದು ಸಂಜಯ್​ ರಾವತ್​ ತಿಳಿಸಿದ್ದಾರೆ.ಇದನ್ನೂ ಓದಿ:ಶ್ರೀರಾಮ ಮಂದಿರ ನಿರ್ಮಾಣದ ನಿರ್ವಿಘ್ನತೆಗೆ ಪೂಜೆ
ಇನ್ನು ಗೃಹ ಸಚಿವ ಅಮಿತ್​ ಷಾ ಅವರಿಗೆ ಈಗಾಗಲೇ ಕರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿಯ ಹಲವು ನಾಯಕರಿಗೆ ಕರೊನಾ ತಗುಲಿದೆ. ಉತ್ತರ ಪ್ರದೇಶದಲ್ಲೂ ಕೊವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚಾಗಿಯೇ ಇದೆ. ಇದೇ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಯವರು, ತಾವು ಅಯೋಧ್ಯೆಗೆ ಭೇಟಿ ನೀಡುತ್ತೇನೆ. ಆದರೆ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದರು. (ಏಜೆನ್ಸೀಸ್​)
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೊದಲು ಹನುಮಗಢಿಗೆ ಹೋಗಲು ಇದೆ ವಿಶೇಷ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
