ಮುಂಬೈ:ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಘಟನೆ ನಡೆದ ವೇಳೆ ಕಾರ್ಖಾನೆ ಒಳಗೆ 10-15 ಮಂದಿ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Chhatrapati Sambhajinagar, Maharashtra: Fire breaks out in a factory in the Waluj MIDC area. Operations to douse the fire are underway. Further details awaited.pic.twitter.com/mY9ChJv8n8

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twenty =
Remember me
