ಆಂಧ್ರಪ್ರದೇಶ:ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ ವ್ಯಾನ್​ ಚಾಲಕ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು (ಜೂ.14) ಮುಂಜಾನೆ ಸಂಭವಿಸಿದೆ. ಮೃತರು ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದವರು ಎಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬೆಚ್ಚಿಬೀಳಿಸೋ ಸಂಗತಿ ಬಿಚ್ಚಿಟ್ಟ ಆರೋಪಿ ಪವಿತ್ರಾ ಗೌಡ! ಹೇಳಿದ್ದಿಷ್ಟು
ಪ್ರತ್ಯಕ್ಷದರ್ಶಿಗಳ ಪ್ರಕಾರ, ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ಮಚಲಿಪಟ್ಟಣಂ ಡಿಎಸ್ಪಿ ಸುಭಾನಿ ಹೇಳಿದ್ದಾರೆ. ಘಟನೆಯಲ್ಲಿ ಇನ್ನೂ ಐವರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಅಪಘಾತದಿಂದಾಗಿ ಈ ಮಾರ್ಗದಲ್ಲಿ ಎರಡು ಕಿಲೋಮೀಟರ್‌ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಸಿಲುಕಿದವರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಮೃತಪಟ್ಟ ಆರು ಜನರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬೆಚ್ಚಿಬೀಳಿಸೋ ಸಂಗತಿ ಬಿಚ್ಚಿಟ್ಟ ಆರೋಪಿ ಪವಿತ್ರಾ ಗೌಡ! ಹೇಳಿದ್ದಿಷ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + six =
Remember me
