ಉತ್ತರಪ್ರದೇಶ:ಉತ್ತರ ಪ್ರದೇಶ ರಾಜ್ಯದಲ್ಲಿ ಮಂಗಳವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಜಾಫರ್‌ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಟ್ರಕ್‌ನಡಿ ಸಿಲುಕಿ ಆರು ಮಂದಿ ಮೃತಪಟ್ಟಿದ್ದಾರೆ.
ಮುಜಾಫರ್‌ನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಮಂದಿ ಪ್ರಯಾಣಿಕರಿದ್ದ ಕಾರು 22 ಚಕ್ರಗಳ ಟ್ರಕ್‌ನಡಿ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಡೆದಿದ್ದೇನು?:ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಕಾರು ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಚಾಪರ್ ಪ್ರದೇಶದ ರಾಂಪುರ ಕ್ರಾಸಿಂಗ್ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಕಾರು ಟ್ರಕ್‌ನಡಿ ಸಿಲುಕಿ ಕೆಲವು ಮೀಟರ್‌ ದೂರ ಸಾಗಿದೆ.ಕಾರು ಅಪಘಾತದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರು ದೆಹಲಿಯ ಶಹದಾರ ನಿವಾಸಿಗಳು ಎಂದು ಮುಜಾಫರ್‌ನಗರ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
32 ವರ್ಷಗಳ ಸಂಸಾರದ ಬಳಿಕ ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ಸ್​​​ ಮುಖ್ಯಸ್ಥ ಗೌತಮ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 18 =
Remember me
