ಚೆನ್ನೈ:ಉನ್ನತ ವ್ಯಾಸಂಗಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬ್ರಿಟನ್​ಗೆ ತೆರಳಿರುವುದರಿಂದ ಪಕ್ಷಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಧಾರಗಳನ್ನು ಕೈಗೊಳ್ಳಲು ಆರು ಮಂದಿಯನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.
ಇದನ್ನೂ ಓದಿ:ರಾಹುಲ್ ಗಾಂಧಿ ಚುನಾವಣಾ ವೆಚ್ಚವಾಗಿ ಕ್ಷೇತ್ರಕ್ಕೆ 70 ಲಕ್ಷ ರೂ.: ಚುನಾವಣಾ ಆಯೋಗಕ್ಕೆ ಮಾಹಿತಿ‘
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

ಹಿರಿಯ ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ರಾಜಾ ಅವರು ಸಮಿತಿಯ ಸಂಚಾಲಕರಾಗಿದ್ದಾರೆ. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎಂ. ಚಕ್ರವರ್ತಿ ಮತ್ತು ಪ್ರೊ. ಕೆ. ಕನಗಸಬಾಪತಿ, ಎಂ ಮುರುಗಾನಂದಂ ಮತ್ತು ಪ್ರೊ. ರಾಮ ಶ್ರೀನಿವಾಸನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಖಜಾಂಚಿ ಎಸ್‌.ಆರ್ ಶೇಖರ್ ಅವರು ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪಕ್ಷದ ಕಾರ್ಯಗಳಿಗೆ ಸಂಬಂಧಿಸಿದಂತೆ ಸಮನ್ವಯ ಸಮಿತಿಯು ರಾಜ್ಯ ಕೋರ್ ಸಮಿತಿಯೊಂದಿಗೆ ಚರ್ಚೆ ನಡೆಸುತ್ತದೆ ಮತ್ತು ಪಕ್ಷದ ಚಟುವಟಿಕೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಸಮನ್ವಯ ಸಮಿತಿಯ ಸಂಚಾಲಕರು ನಿರ್ದೇಶಿಸಿದಂತೆ ಪ್ರತಿಯೊಬ್ಬ ಸದಸ್ಯರು ಒಂದು ಅಥವಾ ಎರಡು ವಲಯಗಳ ಕೆಲಸಗಳನ್ನು ನೋಡಿಕೊಳ್ಳುತ್ತಾರೆ ಎಂದು ಸಿಂಗ್ ತಿಳಿಸಿದ್ದಾರೆ. ಮೂರು ತಿಂಗಳ ಶೈಕ್ಷಣಿಕ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆ. ಅಣ್ಣಾಮಲೈ ಯುಕೆಗೆ ತೆರಳಿದ್ದಾರೆ.
ಕೆ.ಕವಿತಾಗೆ ಜಾಮೀನು ಪ್ರಶ್ನಿಸಿದ ತೆಲಂಗಾಣ ಸಿಎಂ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − thirteen =
Remember me
