ಆಗ್ರಾ:ವೇಗವಾಗಿ ಬಂದ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದ ಖೇರಘರ್ ಬಳಿ ನಡೆದಿದೆ.
ಇದನ್ನೂ ಓದಿ:ಮಾರುಕಟ್ಟೆಯಲ್ಲಿ ಏಕಾ-ಏಕಿ ಕಾಣಿಸಿಕೊಂಡ ಬೆಂಕಿ, ನಾಲ್ವರ ಸಜೀವ ದಹನ
ಸೋಮವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತರನ್ನು ಜಯಪ್ರಕಾಶ್, ಸುಮಿತ್, ಬ್ರಜೇಶ್ ದೇವಿ, ಬ್ರಜ್ಮೋಹನ್ ಶರ್ಮಾ, ಮನೋಜ್ ಶರ್ಮಾ ಮತ್ತು ಆಟೋ ರಿಕ್ಷಾ ಚಾಲಕ ಭೋಲಾ ಎಂದು ಗುರುತಿಸಲಾಗಿದೆ.
ಈ ಕುರಿತು ಮಾತನಾಡಿದ ಪೊಲೀಸರು, ಮೇಲ್ನೋಟಕ್ಕೆ ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದಂತೆ ಕಂಡು ಬಂದಿದ್ದು, ಸ್ನೇಹಿತರನ್ನು ಬಿಟ್ಟು ಮನೆಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಸತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಪ್ರಾಣ ಬಿಟ್ಟ ಶಿಕ್ಷಕಿ
ಘಟನೆಯ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ ಆದರೆ ಆತನ ಇಬ್ಬರು ಸಹಾಯಕರಾದ ಪಿಂಕು ಮತ್ತು ಬನಿಯಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಕುಮಾರ್ ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
