ಗೋದಾವರಿ:ಮದುವೆ ಸಮಾರಂಭದಿಂದ ತೆರಳುತ್ತಿದ್ದ ಒಂದೇ ಕುಟುಂಬದ ಆರು ಜನ ಮಸಣಕ್ಕೆ ಸೇರಿದ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪಳ್ಳಿ ಹೊರವಲಯದಲ್ಲಿ ನಡೆದಿದೆ.
ಇದನ್ನೂ ಓದಿ:ಮಂಡ್ಯ ತಾಲೂಕಿನ 46 ಗ್ರಾಪಂ ವರಿಷ್ಠರಿಗೆ ಮೀಸಲಾತಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ನೇತೃತ್ವದಲ್ಲಿ ನಿಗದಿ
ಸೋಮವಾರ ಬೆಳಗ್ಗೆ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಕುಟುಂಬದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಜಾಜಿನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಿಡ್ಡೆ ಸತಿ ಬಾಬು, ಮಿಡ್ಡೆ ತೇಜ, ಮಿಡ್ಡೆ ಸಾಯಿ, ಅರುಣ, ಶ್ರಾವಣಿ ಮತ್ತು ಎಂಟು ತಿಂಗಳು ಈ ಬೀಕರ ಅಪಘಾತದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತರು ಹೈದರಾಬಾದ್‌ನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಮಹೇಂದ್ರವರಂನ ತಮ್ಮ ಹುಟ್ಟೂರಾದ ಪ್ರಕಾಶನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ರಾಜಮಹೇಂದ್ರವರಂ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
