ಚೆನ್ನೈ:ನಿವಾರ್ ಚಂಡಮಾರುತದ ಪ್ರಕೋಪದ ಕಾರಣ ತಮಿಳುನಾಡಿನಲ್ಲಿ ಐವರು, ಆಂಧ್ರ ಪ್ರದೇಶದಲ್ಲಿ ಒಬ್ಬ ಮೃತಪಟ್ಟಿದ್ದಾರೆ. ಚೆನ್ನೈ ಸುತ್ತಮುತ್ತ ಮರಗಳು, ವಿದ್ಯುತ್ ಕಂಬಗಳು ಉರುಳಿ ಹಾಗೂ ವಿದ್ಯುತ್ ಸ್ಪರ್ಶದಿಂದ ಕನಿಷ್ಠ ಐದು ಜನರು ಬಲಿಯಾಗಿದ್ದಾರೆ. ಮುಂಜಾಗ್ರತಾ ಕ್ರಮಗಳು ಕೈಗೊಂಡಿದ್ದರಿಂದ ಸಾವು- ನೋವು ಅಧಿಕವಾಗಿಲ್ಲ. ಮರ, ವಿದ್ಯುತ್ ಕಂಬ ಬಿದ್ದಿರುವುದಿರಿಂದ, ಭಾರಿ ಮಳೆಯ ಕಾರಣ ಆಸ್ತಿಪಾಸ್ತಿಗೆ ಹಾನಿ. ಅಪಾರ ಬೆಳೆ ನಷ್ಟ ಸಂಭವಿಸಿದೆ.
ರಾಜ್ಯಗಳು ಮತ್ತು ರಾಷ್ಟ್ರೀಯ ತುರ್ತಸೇವೆಗಳ ಸಾವಿರಾರು ಸಿಬ್ಬಂದಿಯನ್ನು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೆರಿಯಲ್ಲಿ ನಿಯೋಜಿಸಲಾಗಿದೆ. ವಿದ್ಯುತ್ ಗ್ರಿಡ್​ಗೆ ಹಾನಿಯಾಗುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರು. ಅನೇಕ ಕಡೆ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ಹಠಾತ್ತನೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೆರಿಯಲ್ಲಿ ಸುಮಾರು 400 ಕೋಟಿ ರೂ. ನಷ್ಟವಾಗಿದೆ ಎಂದು ಸಿಎಂ ವಿ.ನಾರಾಯಣಸ್ವಾಮಿ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ 39,886 ಮಕ್ಕಳ ಸಹಿತ ಕನಿಷ್ಠ 2.25 ಲಕ್ಷ ಜನರಿಗೆ 3,042 ಸರ್ಕಾರಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಗುರುವಾರ ಸಾರ್ವಜನಿಕ ರಜೆ ಘೋಷಿಸಲಾಗಿತ್ತು. ಚೆನ್ನೈ ವಿಮಾನ ನಿಲ್ದಾಣ ಮತ್ತು ಮೆಟ್ರೋ ರೈಲು ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಸುರಕ್ಷತೆ ದೃಷ್ಟಿಯಿಂದ ಸಾಧ್ಯವಾದಷ್ಟು ಮಟ್ಟಿಗೆ ಮನೆಗಳಲ್ಲೇ ಇರುವಂತೆ ಜನರಿಗೆ ಮುಖ್ಯಮಂತ್ರಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ. ಸೂಕ್ತ ಮುಂಜಾಗೃತೆ ಕ್ರಮ ಕೈಗೊಂಡಿದ್ದರಿಂದ ರಾಜ್ಯದಲ್ಲಿ ಹೆಚ್ಚಿನ ಹಾನಿ ಸಂಭವಿಸಲಿಲ್ಲ ಎಂದವರು ಹೇಳಿದ್ದಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಪುದುಚೆರಿಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ವಾಪಸ್ ಪಡೆಯಲಾಗಿದೆ.
ಆಂಧ್ರದಲ್ಲಿ ಒಂದು ಸಾವು:ಚಂಡಮಾರುತದ ಪರಿಣಾಮವಾಗಿ ಆಂಧ್ರದ ರಾಯಲಸೀಮೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಒಬ್ಬ ವ್ಯಕ್ತಿ ಚಿತ್ತೂರಿನಲ್ಲಿ ಓರ್ವ ಕೊಚ್ಚಿ ಹೋಗಿದ್ದಾನೆ. ಇಬ್ಬರನ್ನು ರಕ್ಷಿಸಲಾಗಿದೆ. ರಾಜ್ಯದಲ್ಲಿ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ತಮಿಳುನಾಡು ಮತ್ತು ಪುದುಚೆರಿ ಸಿಎಂಗಳ ಜತೆ ಮಾತನಾಡಿದ್ದು, ಪರಿಸ್ಥಿತಿ ವಿವರ ಪಡೆಯಲಾಗಿದೆ. ಈ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಲ್ಲ ನೆರವನ್ನು ನೀಡಲಿದೆ
|ಅಮಿತ್ ಷಾಕೇಂದ್ರ ಗೃಹ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
