ಆಂಧ್ರಪ್ರದೇಶ:ಇಂದು ಮುಂಜಾನೆ ಲಾರಿ – ಆಟೋ ರಿಕ್ಷಾ ನಡುವಿನ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಈ ಅಪಘಾತ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಗುಡೂರು ಕಡೆಯಿಂದ ಬರುತ್ತಿದ್ದ ಲಾರಿ ತೆಲಂಗಾಣದ ನಲ್ಗೊಂಡ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ 6 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಇನ್ನು 6 ಮಂದಿ ಗಾಯಗೊಂಡಿದ್ದಾರೆ.
ತೆಲಂಗಾಣದ ಮಹಿಳೆಯರು ರಾಜ್ಯದ ಪಲ್ನಾಡು ಜಿಲ್ಲೆಯ ಪುಲಿಪಾಡು ಗ್ರಾಮಕ್ಕೆ ಮೆಣಸಿನಕಾಯಿ ಕೊಯ್ಲು ಮಾಡಲು ತೆರಳುತ್ತಿದ್ದಾಗ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಗುಡೂರು ಕಡೆಯಿಂದ ಲಕ್ನೋಗೆ ಹೋಗುತ್ತಿದ್ದ ನಿಂಬೆಹಣ್ಣು ತುಂಬಿದ ಟ್ರಕ್ ಮುಂಜಾನೆ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ವೇಗವಾಗಿ ಹೋಯಿತು.
ಇದನ್ನೂ ಓದಿ:ದರೋಡೆಗೆ ಬಂದು ಕಂಠಪೂರ್ತಿ ಕುಡಿದು ಮನೆ ಮಾಲೀಕನ ಬೆಡ್​​ರೂಂನಲ್ಲೇ ನಿದ್ರೆಗೆ ಜಾರಿದ ಕಳ್ಳ!
ಅಪಘಾತ ಸ್ಥಳದಿಂದ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಲಾರಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.  ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ತೆಲಂಗಾಣದ ಮಿರಿಯಾಲಗುಡಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಆಯ್ಕೆಯಲ್ಲಿ ಬಿಗ್​​ ಟ್ವಿಸ್ಟ್​; ಮುಂದಿನ ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದ ಸುರ್ಜೇವಾಲ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
