ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಅವರು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರಿಗೆ ಹಲವು ಬಾರಿ ಕಪಾಳಕ್ಕೆ ಹೊಡೆದು, ಕಾಲಿನಿಂದ ಒದ್ದಿದ್ದಾರೆ. ಆಕೆ ಸಹಾಯಕ್ಕೆ ಜೋರಾಗಿ ಕೂಗಿದರು ಯಾರು ಬರಲಿಲ್ಲ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಹಗರಣ: ಜಾರ್ಖಂಡ್ ಸಚಿವ ಆಲಂಗೀರ್ ಆಲಂನನ್ನು ಬಂಧಿಸಿದ ಇಡಿ!
ಸ್ವಾತಿ ಮಲಿವಾಲ್​ ದೂರು ನೀಡಿದ್ದು ಎಫ್​ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಎಳೆ ಎಳೆಯಾಗಿ ದೂರಿನಲ್ಲಿ ವಿವರಿಸಲಾಗಿದೆ.
ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಮಯದಲ್ಲಿ ಕೇಜ್ರಿವಾಲ್ ನಿವಾಸದಲ್ಲಿ ಇದ್ದರು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಸ್ವಾತಿ ಆರೋಪಿಸಿದ್ದಾರೆ. ಎಫ್‍ಐಆರ್​​ನಲ್ಲಿ ಕೇಜ್ರಿವಾಲ್ ಹೆಸರನ್ನು ಉಲ್ಲೇಖಿಸಿಲ್ಲ.
ಷಕೇಜ್ರಿವಾಲ್​ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್​ ನನಗೆ ಏಳೆಂಟು ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ನನ್ನ ಎದೆ, ಹೊಟ್ಟೆ ಮತ್ತು ದೇಹದ ಕೆಳಭಾಗಕ್ಕೆ ಒದ್ದಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಬೆಳಗ್ಗೆ ದೆಹಲಿಯ ಸಿವಿಲ್​ ಲೈನ್ಸ್​ ಪೊಲೀಸ್​ ಠಾಣೆಗೆ ತೆರಳಿದ್ದ ವಾಲಿವಾಲ್​ ಕೇಜ್ರಿವಾಲ್​ ಅವರ ಮನೆಯಲ್ಲಿ ಅವರ ಆಪ್ತ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದರು.
27 ವಾರಗಳ ಗರ್ಭಪಾತ ತೆಗೆಸಲು ಅನುಮತಿ ನಿರಾಕರಣೆ: ​ಭ್ರೂಣಕ್ಕೂ ಬದುಕುವ ಹಕ್ಕಿದೆ ಎಂದ ಕೋರ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
