ನವದೆಹಲಿ:ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್​.ಎಂ. ಕೃಷ್ಣ ಅವರಿಗೆ ಈ ಯುಗಾದಿ ಸ್ಮರಣೀಯವಾಗಿ ಉಳಿಯಲಿದೆ. ಏಕೆಂದರೆ ಇಂದೇ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನವಾಗಿದೆ.
ದೆಹಲಿಯಲ್ಲಿ ಇಂದು ಆಯ್ದ ಕೆಲವರಿಗೆ 2023ರ ಪದ್ಮಪ್ರಶಸ್ತಿಗಳ ಪ್ರದಾನ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಹಂತಗಳಲ್ಲಿ ಪ್ರದಾನವಾಗುವ ಈ ಪ್ರಶಸ್ತಿಯ ಮೊದಲ ಹಂತದ ಪ್ರದಾನ ಯುಗಾದಿ ದಿನವಾದ ಇಂದು ನಡೆದಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ
ಕನ್ನಡಿಗರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಇನ್‌ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷೆ ಸುಧಾ ಮೂರ್ತಿ ಸೇರಿದಂತೆ ದೇಶದ ಅನೇಕ ಸಾಧಕರಿಗೆ ಪದ್ಮಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಜ. 25ರಂದು ಪ್ರಕಟಿಸಿತ್ತು. ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಹಾಗೂ ಎಸ್.ಎಲ್. ಭೈರಪ್ಪ ಮತ್ತು ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪುರಸ್ಕಾರವನ್ನು ಅಂದು ಘೋಷಣೆ ಮಾಡಲಾಗಿತ್ತು.
ಇದನ್ನೂ ಓದಿ:ಜಾಗತಿಕ ಶತಕೋಟ್ಯಧಿಪತಿಗಳ ಪಟ್ಟಿಯ ಟಾಪ್​-10ನಲ್ಲಿರುವ ಏಕೈಕ ಭಾರತೀಯ ಅಂಬಾನಿ!
ಆ ಪೈಕಿ ಕರ್ನಾಟಕದಿಂದ ಇಂದು ಎಸ್​.ಎಂ.ಕೃಷ್ಣ ಪದ್ಮವಿಭೂಷಣ ಪುರಸ್ಕಾರ ಸ್ವೀಕರಿಸಿದ್ದು, ಉದ್ಯಮಿ ಕುಮಾರಮಂಗಲಂ ಬಿರ್ಲಾ ಸೇರಿದಂತೆ ಕೆಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇನ್ನುಳಿದ ಸಾಧಕರಿಗೆ ಮುಂದಿನ ಹಂತಗಳಲ್ಲಿ ಪ್ರದಾನ ನಡೆಯಲಿದೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ದೇಶದಲ್ಲಿ ಈ ಸಲ ಒಟ್ಟು 106 ಮಂದಿಯನ್ನು ಪದ್ಮಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆ ಪೈಕಿ 6 ಸಾಧಕರನ್ನು ಪದ್ಮವಿಭೂಷಣ, 9 ಸಾಧಕರನ್ನು ಪದ್ಮಭೂಷಣ ಮತ್ತು 91 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!

ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
