ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ)ವು ಸರ್ಕಾರ ರಚಿಸಿದೆ. ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಎನ್‌ಡಿಎಯ ಸಂಖ್ಯಾಬಲ ಬಹಳ ದುರ್ಬಲವಾಗಿದ್ದು, ಒಂದು ಸಣ್ಣ ತಪ್ಪು ಸರ್ಕಾರವನ್ನು ಪತನಗೊಳಿಸಬಹುದು. ಮೋದಿಯವರ ಪಾಳಯದಲ್ಲಿ ಸಾಕಷ್ಟು ಅತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಯಾವುದೇ ವಿವರಗಳನ್ನು ಬಹಿರಂಗಪಡಿಸದೆ, ಮೋದಿ ಪಾಳಯದೊಳಗಿರುವ ಜನರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.
ಇದನ್ನು ಓದಿ:ನೀಟ್​ ಪರೀಕ್ಷೆ ವಿವಾದ; ನಿರ್ಲಕ್ಷ್ಯ ಯಾರದ್ದಾದರೂ ಸಂಪೂರ್ಣ ನಿಭಾಯಿಸಬೇಕು ಎಂದ ಸುಪ್ರೀಂಕೋರ್ಟ್​​​
ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್​​ ಗಾಂಧಿ, ಭಾರತೀಯ ರಾಜಕೀಯ ವ್ಯವಸ್ಥೆಯಲ್ಲಿ ಈಗ ಅನೇಕ ಸಾಧ್ಯತೆಗಳು ತೆರೆದುಕೊಂಡಿವೆ. 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮೊದಲ ಬಾರಿಗೆ ಬಹುಮತ ಕಳೆದುಕೊಂಡಿದೆ. ಇದರಿಂದಾಗಿ ದೇಶದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದೆ ಎಂದು ಹೇಳಿದ್ದಾರೆ.
ಕಳೆದ ವಾರ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಿದರು, ಜವಾಹರಲಾಲ್ ನೆಹರು ನಂತರ ಸತತ ಮೂರು ಬಾರಿ ಗೆದ್ದ ಭಾರತದ ಎರಡನೇ ಪ್ರಧಾನಿಯಾಗಿದ್ದಾರೆ. ಆದರೆ ಅವರ ಮೈತ್ರಿಯ ಸ್ಥಿರತೆಯ ಬಗ್ಗೆ ರಾಜಕೀಯ ವಿಶ್ಲೇಷಕರು ಪ್ರಶ್ನೆಗಳನ್ನು ಎತ್ತಿದ್ದಾರೆ. ಕಳೆದ ದಶಕದ ಸರ್ಕಾರಗಳಿಗೆ ಹೋಲಿಸಿದರೆ ಈಗಿನ ಸಮ್ಮಿಶ್ರ ಸರ್ಕಾರ ದುರ್ಬಲವಾಗಿರಲಿದೆ ಎಂಬುದು ವಿಶ್ಲೇಷಕರ ಮಾತು. ಬಿಜೆಪಿ ಅಧಿಕಾರದಲ್ಲಿ ಉಳಿಯಲು ಸಣ್ಣ ಮೈತ್ರಿಕೂಟಗಳನ್ನು ಅವಲಂಬಿಸಬೇಕೆಂಬುದು ಇದರ ಹಿಂದಿನ ಕಾರಣ ಆಗಿದೆ ಎಂದಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಎಕ್ಸಿಟ್​​ ಪೋಲ್​​ಗಳು ಭವಿಷ್ಯಕ್ಕಿಂತ ಪ್ರತಿಪಕ್ಷಗಳ ಮೈತ್ರಿಕೂಟ I.N.D.I.A ಬಣವು ನಿರೀಕ್ಷೆಗಿಂತ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದರು. (ಏಜೆನ್ಸೀಸ್​​)
ಕೇಂದ್ರ ಸರ್ಕಾರಕ್ಕೆ ಚುನಾವಣೆ ಮೇಲಿರುವ ಕಾಳಜಿ ಪ್ರಯಾಣಿಕರ ಮೇಲೆ ಇಲ್ಲ; ಮಮತಾ ಬ್ಯಾನರ್ಜಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
