ಕೋಲ್ಕತ್ತಾ:ಬಂಗಾಳದ ಬಿರ್ಭುಮ್ ಜಿಲ್ಲೆಯ ಶಾಲೆಯೊಂದರಲ್ಲಿ ಬಿಸಿಯೂಟದ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಹಲವಾರು ಶಾಲಾ ಮಕ್ಕಳು ಸೇವಿಸಿದ್ದಾರೆ. ಈ ಮಕ್ಕಳನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿರ್ಭುಮ್​ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ. ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. “ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಅವರು ಸಿಬ್ಬಂದಿ ಹೇಳಿದರು.

ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬಂದಿವೆ. ಜನವರಿ 10ರಂದು ಭೇಟಿ ನೀಡಲಿರುವ ಜಿಲ್ಲಾ ನಿರೀಕ್ಷಕರಿಗೆ ಮಾಹಿತಿ ನೀಡಿದ್ದೇನೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಮಾಹಿತಿ ನೀಡಿದರು.
ಒಬ್ಬರನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಘೇರಾವ್ ಮಾಡಿ ಅವರ ದ್ವಿಚಕ್ರ ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
