ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಿಡಿಯೋ ವೈರಲ್​ ಆಗುತ್ತಲೇ ಇರುತ್ತದೆ. ಅದರಲ್ಲೂ ಹಾವಿನ ವಿಡಿಯೋಗಳು ಅಂದರೆ ನೋಡುಗರನ್ನು ಬಹುಬೇಗ ಸೆಳೆದುಬಿಡುತ್ತವೆ ಮತ್ತು ಕ್ಷಣಾರ್ಧದಲ್ಲಿ ಸಾವಿರಾರು ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆ. ಇದೀಗ ಅಂಥದ್ದೇ ವಿಡಿಯೋವೊಂದು ವೈರಲ್​ ಆಗಿದೆ.
ಭಾರತೀಯ ಅರಣ್ಯಾಧಿಕಾರಿ ಪರ್ವೀನ್ ಕಾಸ್ವಾನ್​​ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ರಸ್ತೆಯೊಂದರ ಪಕ್ಕದಿಂದ ಹೊರಬರುವ ಹಾವೊಂದು ಮನೆಯನ್ನು ಪ್ರವೇಶಿಸುವ ಪ್ರಯತ್ನ ಮಾಡುತ್ತದೆ. ಈ ವೇಳೆ ಮಹಿಳೆಯೊಬ್ಬಳು ಕೂಗಿ ಕೊಳ್ಳುವುದು ವಿಡಿಯೋದಲ್ಲಿ ಹಿನ್ನೆಲೆ ಧ್ವನಿಯಲ್ಲಿ ಕೇಳುತ್ತದೆ. ಆಕೆ ಕೂಗಿಕೊಂಡ ಬೆನ್ನಲ್ಲೇ ಗಾಬರಿಗೊಳ್ಳುವ ಹಾವು ಚಪ್ಪಲಿಯನ್ನು ಕಚ್ಚಿಕೊಂಡು ಅಲ್ಲಿಂದ ಪರಾರಿಯಾಗುತ್ತದೆ,
ಈ ವಿಡಿಯೋ ಎಲ್ಲಿಯದ್ದು ಎಂಬುದು ತಿಳಿದುಬಂದಿಲ್ಲ. ಸದ್ಯ ವಿಡಿಯೋ ವೈರಲ್​ ಆಗಿದೆ. ಹಾವಿಗೆ ಕಾಲುಗಳು ಇಲ್ಲದಿದ್ದರೂ ಈ ಚಪ್ಪಲಿಯನ್ನು ತೆಗೆದುಕೊಂಡು ಹೋಗಿ ಏನು ಮಾಡುತ್ತದೆ ಎಂಬುದೇ ಕುತೂಹಲಕಾರಿ ಸಂಗತಿ ಎಂದು ಪರ್ವೀನ್​ ಕಾಸ್ವಾನ್​ ಅವರು ವಿಡಿಯೋಗೆ ಅಡಿಬರಹ ನೀಡಿದ್ದಾರೆ.
I wonder what this snake will do with that chappal. He got no legs. Unknown location.pic.twitter.com/9oMzgzvUZd
— Parveen Kaswan, IFS (@ParveenKaswan)November 24, 2022

ಇದುವರೆಗೂ ವಿಡಿಯೋ 1 ಲಕ್ಷದ 89 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಐದು ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ಅಲ್ಲದೆ, 400 ಕ್ಕೂ ಹೆಚ್ಚು ಜನ ವಿಡಿಯೋ ಪ್ರತಿಕ್ರಿಯಿಸುವ ಮೂಲಕ ಹುಬ್ಬೇರಿಸಿದ್ದಾರೆ.(ಏಜೆನ್ಸೀಸ್​)
ಸಪ್ತಪದಿ ತುಳಿಯೋ ಮುನ್ನವೇ ಸನ್ನಿಧಿಗೆ ಮೋಸ? ಈ ಸಂಗತಿ ಗೊತ್ತಾದ್ರೆ ವೈಷ್ಣವಿಗೆ ಉಗಿದು ಉಪ್ಪಿನಕಾಯಿ ಹಾಕ್ತಾರಂತೆ!

ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…

ಆಡಿಯೋ ಕೇಳಿ ನನ್ನ ಮಗಳು ಶಾಕ್​ನಲ್ಲಿದ್ದು, ರೂಂ‌ಮಿಂದ ಹೊರ ಬಂದಿಲ್ಲ: ವೈಷ್ಣವಿ ತಂದೆಯ ನೋವಿನ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
