ಶ್ರೀನಗರ:ಇಬ್ಬರು ಬಾಲಕಿಯರನ್ನು ಕರೆದುಕೊಂಡು ದೆಹಲಿಗೆ ಹೊರಟಿದ್ದ ಯೋಧನನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸಂದೇಹಾಸ್ಪದ ನಡವಳಿಕೆ ಕಾರಣ ಅವರನ್ನು ತಡೆಯಲಾಗಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ವಶಕ್ಕೆ ಒಪ್ಪಿಸಲಾದ ರಾಷ್ಟ್ರೀಯ ರೈಫಲ್ಸ್​ನ ಯೋಧ ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ದೆಹಲಿಗೆ ಹೊರಟ ಉದ್ದೇಶವೇನು ಎಂಬುದು ಬಹಿರಂಗವಾಗಿಲ್ಲ. ಮೂವರನ್ನೂ ಈ ಬಗ್ಗೆ ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ವಿಡಿಯೋ ಸಾಕ್ಷಿಗಳನ್ನು ಸಿಸಿಬಿಗೆ ಕೊಟ್ಟ ಪ್ರಶಾಂತ್ ಸಂಬರಗಿ: ಆದ್ರೆ ಅಧಿಕಾರಿಗಳು ಹೇಳಿದ್ದೇನು?
ಈ ಬೆಳವಣಿಗೆಯನ್ನು ರಾಷ್ಟ್ರೀಯ ರೈಫಲ್ಸ್​ ಕೇಂದ್ರ ಕಚೇರಿ ಗಮನಕ್ಕೆ ತರುವ ಕೆಲಸ ಮಾಡಲಾಗಿದ್ದು, ಅಲ್ಲಿಂದ ಇನ್ನೂ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)
ವಕ್ಫ್ ಬೋರ್ಡ್​ಗೆ ನ್ಯಾಯಾಂಗದ ಅಧಿಕಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 4 =
Remember me
