ಕಾಸರಗೋಡು:ಮೊಬೈಲ್​ ಚಟ ತ್ಯಜಿಸು, ಈ ರೀತಿ ಇರುವುದು ಬೇಡ ಎಂದು ಬುದ್ದಿ ಮಾತು ಹೇಳಿದ ತಾಯಿಯನ್ನು ಪುತ್ರನೊಬ್ಬ ಅಮಾನುಷವಾಗಿ ಥಳಿಸಿ, ಹತ್ಯೆಗೈದ ವಿಲಕ್ಷಣ ಘಟನೆಯೊಂದು ಕೇರಳದ ಕಾಸರಗೋಡಿನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸಹಾಯಕ ಪ್ರಾಧ್ಯಾಪಕ ನೇಮಕ ಆದೇಶ ಹೊರಡಿಸಲು ಸಚಿವ ಡಾ. ಸುಧಾಕರ್ ಸೂಚನೆ
63 ವರ್ಷದ ಮಹಿಳೆಯೊಬ್ಬರು ಮೊಬೈಲ್ ಫೋನ್ ಚಟಕ್ಕೆ ಏಕೆ ದಾಸನಾಗಿರುವೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಕುಪಿತಗೊಂಡ ಪುತ್ರ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಒಂದು ವಾರಗಳ ನಂತರ ಮಹಿಳೆ ಕಣ್ಣೂರು ಜಿಲ್ಲೆಯ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಮಹಿಳೆಯನ್ನು ಜಿಲ್ಲೆಯ ಕಣಿಚಿರ ರುಗ್ಮಿಣಿ ಎಂದು ಗುರುತಿಸಲಾಗಿದ್ದು, ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊಬೈಲ್​ ಗೀಳು ಯಾಕೆ ಎಂದು ಪ್ರಶ್ನಿಸಿದ್ದನೇ ಕಾರಣ ಮಾಡಿಕೊಂಡ ಪುತ್ರ ಸುಜಿತ್, ಮನೆಯ ಗೋಡೆಗೆ ತನ್ನ ತಾಯಿಯ ತಲೆ ಬಡಿದು ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.
ಇದನ್ನೂ ಓದಿ:ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ ಉದ್ಘಾಟನೆ ಅ.16 ಕ್ಕೆ
ಅಪರಾಧ ವರದಿಯಾದ ಕೂಡಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಸುಜಿತ್​ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು,  ಮೊಬೈಲ್ ಫೋನ್ ಅನ್ನು ನಿರಂತರವಾಗಿ ಬಳಸುವುದನ್ನು ಪ್ರಶ್ನಿಸಿದ್ದರಿಂದ ತನ್ನ ತಾಯಿಯ ಮೇಲೆ ದಾಳಿ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಯಾರದೋ ಮನೇಲಿ ದುಡ್ಡು ಸಿಕ್ಕರೆ ಕಾಂಗ್ರೆಸ್​ ನಾಯಕರು ರಾಜೀನಾಮೆ ಕೊಡ್ಬೇಕಾ?
ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಕೋಝಿಕ್ಕೋಡ್‌ನ ಕುತಿರವಟ್ಟಂನಲ್ಲಿರುವ ಸರ್ಕಾರಿ ಮಾನಸಿಕ ಆಸ್ಪತ್ರೆಗೆ ದಾಖಲಿಸಲಾಗಿದೆ,(ಏಜೆನ್ಸೀಸ್).
ಟೋಲ್ ಪ್ಲಾಜಾ ಡಿವೈಡರ್‌ಗೆ ಕಾರು ಡಿಕ್ಕಿ, ಚಾಲಕ ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
