ಥಾಣೆ:31 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ದುರ್ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ವಿನಿತಾ ಭಟ್ಕರ್(66) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಾರುಗಳನ್ನು ಸಾಗಿಸುತ್ತಿದ್ದ ಎರಡು ಕ್ಯಾಂಟರ್ ಬೆಂಕಿಗೆ ಆಹುತಿ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಮಹಿಳೆ ವಿನಿತಾ ತನ್ನ ಪತಿಯೊಂದಿಗೆ ಕೊಪ್ರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗುರುವಾರ ಜಗಳವಾಡುವ ಸಂದರ್ಭದಲ್ಲಿ ಸಿಟ್ಟಿಗೆದ್ದ ಆರೋಪಿಯು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯ ಚಾಕುವಿನಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಕುವಿನಿಂದ ಮೊದಲು ತನ್ನ ತಾಯಿಯನ್ನು ಇರಿದು ಕೊಂದ ಆರೋಪಿಯು, ನಂತರ ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಘಟನೆಯ ನಂತರ ಆರೋಪಿಯು ಪರಾರಿಯಾಗಿದ್ದು, ಈತನಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ. ಆರೋಪಿಯ ಗುರುತು ಹಾಗೂ ಗಾಯಾಳುವಿನ ಗುರುತು ತಿಳಿದು ಬಂದಿಲ್ಲ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
