ನವದೆಹಲಿ:ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯ ಅರುಪ್ ಬಸು ಮತ್ತು ಅವರ ತಂಡ ಸೋನಿಯಾ ಅವರಿ ತಪಾಸಣೆ ನಡೆಸುತ್ತಿದೆ.
ಇಂದು ಗಂಗಾರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಡಿ.ಎಸ್ ರಾಣಾ ಈ ಕುರಿತಂತೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ. ಅವರು ಜ್ವರಿದಂದ ಬಳಲುತ್ತಿದ್ದಾರೆ. ಕಳವಳಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!
ಸೋನಿಯಾ ಗಾಂಧಿ ಅವರು ಈ ವರ್ಷ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಜನವರಿಯಲ್ಲಿ ಸೋನಿಯಾ ಗಾಂಧಿಯವರು  ಉಸಿರಾಟ, ಸೋಂಕಿನ ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು.
ಮೋದಿ ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುತ್ತದೆ : ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
