ನವದೆಹಲಿ: ಸಂಸತ್ ಅಧಿವೇಶನ ಆರಂಭಕ್ಕೆ ಇನ್ನೆರಡು ದಿನ ಇರುವಂತೆಯೇ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಪುತ್ರ ರಾಹುಲ್ ಗಾಂಧಿ ಕೂಡ ಅವರೊಂದಿಗೆ ಹೋಗಿದ್ದಾರೆ. ಎರಡು ವಾರ ಅವರು ವಿದೇಶದಲ್ಲಿ ಇರಲಿದ್ದು, ನಂತರ ಬಂದು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರೊಟೀನ್ ಚೆಕ್​ಅಪ್​ಗಾಗಿ ಅವರು ವಿದೇಶಕ್ಕೆ ತೆರಳಿರುವಂಥದ್ದು. ಚೆಕ್​ಅಪ್ ಮುಗಿದ ಕೂಡಲೇ ಹಿಂದಿರುಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಹಿಂದೆಯೂ ಅವರು ಈ ರೀತಿ ವಿದೇಶಕ್ಕೆ ಆರೋಗ್ಯ ತಪಾಸಣೆ, ಚಿಕಿತ್ಸೆಗಾಗಿ ತೆರಳಿದ್ದರು.
ಇದನ್ನೂ ಓದಿ:ಶ್ರೀನಗರ ವಿಮಾನ ನಿಲ್ದಾಣದಲ್ಲಿ ಯೋಧ ಮತ್ತು ಇಬ್ಬರು ಬಾಲಕಿಯರು ಪೊಲೀಸ್ ವಶಕ್ಕೆ
ಇತ್ತೀಚೆಗೆ ಜುಲೈ 30ರಂದು ಸೋನಿಯಾ ಅವರನ್ನು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿಯತವಾದ ಆರೋಗ್ಯ ತಪಾಸಣೆಗೆ ಅಡ್ಮಿಟ್ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿದ್ದವು. (ಏಜೆನ್ಸೀಸ್)
ಸಂವಿಧಾನ ತಿದ್ದುಪಡಿಯಿಂದಷ್ಟೇ ಮಾತೃಭಾಷೆಗೆ ಒತ್ತು: ಭೈರಪ್ಪ, ಕಂಬಾರ, ಮನು ಬಳಿಗಾರ್ ಪತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 5 =
Remember me
